ಹೌದು ಅನೇಕ ಕಾಹಿಲೆ ರೋಗ ದೈಹಿಕ ತೊಂದರೆಗೆ ಮನೆಯಲ್ಲೇ , ಆಹಾರ, ನೀರು ಮನೆಯಲ್ಲಿರುವ ಅಡಿಗೆಗೆ ಉಪಯೋಗಿಸುವ ಸೊಪ್ಪು, ತರಕಾರಿ, ಸಸ್ಯ, ನಾರು ಬೇರುಗಳಿಂದ ಔಷಧಿ ಮಾಡಿಕೊಂಡು ವಾಸಿಮಾಡಿಕೊಳ್ಳಬಹುದು. ಇದೆ ರೀತಿಯಲ್ಲಿ ಪಪ್ಪಾಯದಲ್ಲಿ ಯಾವೆಲ್ಲ ರೋಗಗಳನ್ನು ನಿವಾರಿಸುವ ಔಷಧಿ ಗುಣ ಹೊಂದಿದೆ ಅನ್ನೋದನ್ನ ತಿಳಿಯೋಣ ಬನ್ನಿ..

ಪಪ್ಪಾಯದಲ್ಲಿ ವಿಟಮಿನ್ ಎ, ಸಿ, ಇ, ಐರನ್ ಹಾಗೂ ಕ್ಯಾಲ್ಸಿಯಂ ಅಂಶ ಹೇರಳವಾಗಿದೆ. ಇದರಲ್ಲಿರುವ ‘ಪಪ್ಪಾಯಿಯನ್’ ಎಂಬ ಜೀವಸತ್ವವು ಜೀರ್ಣಕಾರಕವಾಗಿ ಕೆಲಸ ಮಾಡುತ್ತದೆ. ವಯಸ್ಸಾದಂತೆ ಕುಗ್ಗುವ ಜೀರ್ಣಶಕ್ತಿಯನ್ನು ವೃದ್ಧಿಸಲು ಪಪ್ಪಾಯಿ ಸಹಕರಿಸುತ್ತದೆ. ಮೂಳೆ ಸವೆತಕ್ಕೆ, ಹೃದಯ ಕಾಯಿಲೆ ಉಳ್ಳವರಿಗೂ ಪಪ್ಪಾಯಿ ಸೇವನೆ ಶ್ರೇಷ್ಠ. ಮಧುಮೇಹಿಗಳೂ ಈ ಹಣ್ಣನ್ನು ಧಾರಾಳವಾಗಿ ಸೇವಿಸಬಹುದು.

ಪಪ್ಪಾಯಿ ಸೇವನೆಯಿಂದ ಕರುಳಿನಲ್ಲಿ ಸೇರಿಕೊಳ್ಳುವ ಜಂತುಗಳು ನಾಶವಾಗುವುವು. ಇದರ ಎಲೆಗಳಿಂದ ಹಲ್ಲುಜ್ಜಿದರೆ ಹಲ್ಲು ಹಾಗೂ ವಸಡು ನೋವು ನಿವಾರಣೆಯಾಗುವವು. ಪಪ್ಪಾಯಿ ಸೇವನೆಯಿಂದ ಬಾಣಂತಿಯರಿಗೆ ಎದೆಹಾಲು ಹೆಚ್ಚುತ್ತದೆ. ಮಕ್ಕಳಿಗೆ, ಹಾಲುಣಿಸುವ ತಾಯಂದಿರಿಗೆ ಪಪ್ಪಾಯಿಯು ಶಕ್ತಿದಾಯಕ ಆಹಾರ. ಮಲಬದ್ಧತೆಯೂ ನಿವಾರಣೆಯಾಗುವುದು.

ಹಾಲು, ಜೇನುತುಪ್ಪ ಹಾಗೂ ಪರಂಗಿ ಹಣ್ಣನ್ನು ಮಿಶ್ರ ಮಾಡಿ ಸೇವಿಸುವುದರಿಂದ ನರ ದೌರ್ಬಲ್ಯ ದೂರವಾಗುವುದು. ಪಪ್ಪಾಯಿ ಹಣ್ಣಿನ ಹೋಳಿನಿಂದ ಚರ್ಮವನ್ನುಜ್ಜಿದರೆ ಚರ್ಮದ ಮೇಲಿನ ಕಲೆ ಮಾಯವಾಗುತ್ತದೆ. ಮೂಲವ್ಯಾಧಿ, ಯಕೃತ್ತಿನ ದೋಷಗಳಿಗೂ ಪಪ್ಪಾಯಿ ಅತ್ಯುತ್ತಮ ಔಷಧ. ಎಲೆಯಿಂದ ಒಸರುವ ದ್ರವವನ್ನು ಗಾಯಕ್ಕೆ ಹಚ್ಚುವುದರಿಂದ ಗಾಯವು ಬೇಗನೆ ವಾಸಿಯಾಗುತ್ತವೆ.

LEAVE A REPLY

Please enter your comment!
Please enter your name here