ಅಮೃತಬಳ್ಳಿ ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಚಿರಪರಿಚಿತವಾಗಿದೆ, ಈ ಅಮೃತಬಳ್ಳಿಯನ್ನು ಕೆಲವರು ಮನೆಯ ಮುಂದೆ ಬೆಳೆಸಿರುತ್ತಾರೆ ಇನ್ನು ಕೆಲವರು ಹೊಲ ಗದ್ದೆಗಳ ಬಳಿಯಲ್ಲಿ ಇವುಗಳನ್ನು ಕಾಣಬಹುದು. ಸಾಮಾನ್ಯವಾಗಿ ಕಾಡುವಂತ ಮನುಷ್ಯನ ದೈಹಿಕ ಸಮಸ್ಯೆಗಳಿಗೆ ಇದರಲ್ಲಿದೆ ಔಷಧಿಯ ಗುಣಗಳು.

ಅಮೃತಬಳ್ಳಿಯನ್ನು ಮಧುಮೇಹ ರೋಗಕ್ಕೆ ಔಷಧಿಯಾಗಿ ಬಳಸುತ್ತಾರೆ. ಅದರ ತಜಾ ಕಾಂಡವನ್ನು ಜಜ್ಜಿ , ಹಿಸುಕಿ ರಸ ತೆಗೆದು 2 ಚಮಚೆ ರಸವನ್ನು ಜೇನು ತುಪ್ಪದೊಂದಿಗೆ ಬೆರೆಸಿ ದಿನಕ್ಕ್ಕೆ 3 ಬಾರಿ ಆಹಾರ ಸೇವನೆಯ ಮುಂಚೆ ಕುಡಿಯ ಬೇಕು.

ಬಾಯಾರಿಕೆ, ವಾಂತಿ, ವಾಕರಿಕೆ: ಸುಮಾರು 25 ಗ್ರಾಂನಷ್ಟು ಅಮೃತಬಳ್ಳಿಯನ್ನು ಅರೆದು ಶುದ್ಧವಾದ ನೀರು ಹಾಕಿ ಕಾಯಿಸಿ ಕಷಾಯ ಮಾಡಿಟ್ಟುಕೊಳ್ಳುವುದು. ದಿನಕ್ಕೆ ಮೂರು ವೇಳೆ ಸ್ವಲ್ಪ ಜೇನುತುಪ್ಪ ಸೇರಿಸಿ ಕುಡಿಯುವುದು.

ಮೂತ್ರನಾಳದಲ್ಲಿ ಕಲ್ಲುಸಮಸ್ಯೆ ಇದ್ರೆ ಅಮೃತಬಳ್ಳಿ, ನೆಗ್ಗಿಲು, ಅಶ್ವಗಂಧ, ನೆಲ್ಲಿ, ಶುಂಠಿಯ ಸಮತೂಕ ನಯವಾಗಿ ಚೂರ್ಣ ಮಾಡಿಟ್ಟುಕೊಳ್ಳುವುದು. 10ಗ್ರಾಂನಷ್ಟು ಚೂರ್ಣವನ್ನು ಶುದ್ಧ ನೀರು ಹಾಕಿ ಕಷಾಯ ಮಾಡಿ ವೇಳೆಗೆ ಒಂದು ಟೀ ಚಮಚದಷ್ಟು ಕುಡಿಸುವುದು.

ಮೈಮೇಲೇಳುವ ಪಿತ್ತದ ಗಂಧೆಗಳು: ಅಮೃತಬಳ್ಳಿಯ ಎಲೆ ಸಾಸಿವೆ ಶ್ರೀಗಂಧದ ಚಕ್ಕೆ ಇವುಗಳ ಸಮತೂಕವನ್ನು ಎಮ್ಮೆಯ ಹಾಲಿನಲ್ಲಿ ಅರೆದು ಮೈಗೆ ಹಚ್ಚುವುದು. ಪಿತ್ತ ವಿಕಾರ ಕಡಿಮೆ ಆಗಿ ಪಿತ್ತದ ಗಂಧೆಗಳು ಮತ್ತು ನೆವೆ ಉರಿ ಶಮನವಾಗುವುದು.

ಹೊಟ್ಟೆ ಉರಿ: ಹಸಿಸೊಪ್ಪಿನ ರಸ 2 ಟೀ ಚಮಚದಷ್ಟು ಸ್ವಲ್ಪ ಓಂಪುಡಿ ಸೇರಿಸಿ ಮಜ್ಜಿಗೆಯಲ್ಲಿ ಕದಡಿ ಕುಡಿಯುವುದು.

ವಾತ ಜ್ವರದಲ್ಲಿ ಅಮೃತಬಳ್ಳಿ ತ್ರಫಲ ಚೂರ್ಣ, ತುಂಗೇಗುಡ್ಡೆ ಕೊತ್ತಂಬರಿ, ಶತಾವರಿ, ಕಳ್ಳಂಗಡಲೆ ಮತ್ತು ಬೇಲದ ಬೇರು ಇವುಗಳ ಸಮತೂಕದಷ್ಟನ್ನು ಚೆನ್ನಾಗಿ ಒಣಗಿಸಿ ಪುಡಿ ಮಾಡಿಟ್ಟುಕೊಳ್ಳುವುದು. ಸ್ವಲ್ಪ ಚೂರ್ಣಕ್ಕೆ ಎರಡು ಬಟ್ಟಲು ನೀರು ಹಾಕಿ ಕಾಯಿಸಿ ಅರ್ಧ ಬಟ್ಟಲು ಕಷಾಯವನ್ನು ಮಾಡಿ ಆರಿಸಿ ಕುಡಿಯುವುದು.

ಬುದ್ಧಿ ಭ್ರಮಣೆ ಸಮಸ್ಯೆಗೆ ಹಸಿ ಅಮೃತಬಳ್ಳಿಯನ್ನು ತಂದು ತಣ್ಣನೆಯ ಹಾಲಿನಲ್ಲಿ ನುಣ್ಣನೆ ರುಬ್ಬಿ ತಲೆಗೆ ಪಟ್ಟು ಹಾಕುವುದು. ಒಂದೆರಡು ತಾಸುಗಳ ನಂತರ ಬಿಸಿ ನೀರಿನಿಂದ ಸ್ನಾನ ಮಾಡುವುದು.

ಬೊಜ್ಜು ಮತ್ತು ಕೊಬ್ಬು ಕಡಿಮೆ ಆಗಲು, ಆಯಸ್ಸು ಹೆಚ್ಚಲು: ಇದು ಪರಿಣಾಮಕಾರಿ ಔಷಧಿ. ಮೇಲಿನ ಕಷಾಯಕ್ಕೆ ಒಂದು ಗುಲಗಂಜಿಯಷ್ಟು ಲೋಹ ಭಸ್ಮವನ್ನು ಮತ್ತು ಟೀ ಚಮಚ ಜೇನು ತುಪ್ಪವನ್ನು ಕೂಡಿಸಿ ಸೇವಿಸುವುದು. ಸುಮಾರು 40 ದಿವಸ ಅರಳ ಅಂಗಸಾಧನೆ, ಕೊಬ್ಬು ರಹಿತ ಆಹಾರ, ತಣ್ಣೀರು ಸ್ನಾನ ಮತ್ತು ದೀರ್ಘ ನಡಿಗೆ ಅಭ್ಯಾಸ ಮಾಡಿಕೊಳ್ಳುವುದು.

ಸ್ತ್ರೀಯರ ರಕ್ತ ಪ್ರದರಕ್ಕೆ 20ಗ್ರಾಂ ಹಸಿ ಅಮೃತಬಳ್ಳಿಯ ರಸಕ್ಕೆ ಒಂದು ಟೀ ಚಮಚದಷ್ಟು ಸಕ್ಕರೆ ಬೆರೆಸಿ ದಿವಸಕ್ಕೆ ಎರಡು ವೇಳೆ ಸೇವಿಸುವುದು.

ಅಮೃತಬಳ್ಳಿ ನಯವಾದ ಚೂರ್ಣವನ್ನು ಹಸುವಿನ ಹಾಲಿನಲ್ಲಿ ಕದಡಿ ದಿವಸಕ್ಕೆ ಎರಡು ಬಾರಿ ಸೇವಿಸುವುದು ಅಥವಾ ಮಜ್ಜಿಗೆಯಲ್ಲಿ ತೆಗೆದುಕೊಳ್ಳುವುದು, ಪ್ರಮಾಣ ಒಂದು ಗ್ರಾಂ ಒಂದು ಭಾರಿ ಹೀಗೆ ಮಾಡುವುದರಿಂದ ಉರಿ ಮೂತ್ರ ನಿವಾರಣೆ ಕಾಣಬಹುದು.

LEAVE A REPLY

Please enter your comment!
Please enter your name here