ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ, ಎಲ್ಲಿ ಎಷ್ಟು ಹುದ್ದೆಗಳಿವೆ ಹಾಗು ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ ಇವ್ಗಳನ್ನು ತಿಳಿಯಲು ಮುಂದೆ ನೋಡಿ ಹಾಗೂ ನಿಮ್ಮ ಸ್ನೇಹಿತರಿಗೂ ಈ ವಿಚಾರವನ್ನು ತಿಳಿಸಿ ಇದರಿಂದ ತಮ್ಮ ಜೀವನದ ಭವಿಷ್ಯವನ್ನು ರೂಪಿಸಿಕೊಳ್ಳಲು ಅನುಕೂಲತೆಯಾಗುವುದು.

ರಾಯಚೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ವಿವಿಧ ಗ್ರಾಮ ಹಾಗೂ ವಾರ್ಡ್ ಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 119 ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟಂಬರ್ 25
ಅದೇ ರೀತಿ ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 78 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ, ಹೆಚ್ಚಿನ ಮಾಹಿತಿಗಾಗಿ www.anganwadirecruit.kar.nic.in ಗಮನಿಸಬಹುದಾಗಿದೆ.

LEAVE A REPLY

Please enter your comment!
Please enter your name here