ಕಳೆದ ದಿನಗಳಿಂದ ರಾಜ್ಯದ ಹಲವು ಕಡೆ ಉತ್ತಮ ಮಳೆಯಾಗುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಬೀರಿದೆ. ಅದರಲ್ಲೂ ಬರದ ನಾಡು ಚಿತ್ರದುರ್ಗಕ್ಕೆ ಕಳೆದ 4 ವರ್ಷದಲ್ಲಿ ಇಲ್ಲದಂತ ಮಳೆ ಈ ವರ್ಷ ಅಂದರೆ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ ಇದರಿಂದ ಕೃಷಿ ಹೊಂಡಗಳು ಹಾಗೂ ಕೆರೆ ಕಟ್ಟೆಗಳು ತುಂಬುತ್ತಿವೆ.

ಇನ್ನು ಮುಂದಿನ ಮೂರು ನಾಲ್ಕು ದಿನಗಳ ಕಾಲ ರಾಜ್ಯದ ಈ ಜಿಲ್ಲೆಗಳಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಭಾರತೀಯ ಹವಾಮಾನ ಇಲಾಖೆ ಹೈ ಅಲರ್ಟ್ ಘೋಷಣೆ ಮಾಡಿದೆ. ಹಾಗಾದರೆ ಮುಂದಿನ ಇನ್ನು ಮೂರು ದಿನಗಳಲ್ಲಿ ರಾಜ್ಯದ ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಅನ್ನೋದನ್ನ ಮುಂದೆ ನೋಡಿ.

ಕರಾವಳಿ ಹಾಗೂ ಮಲೆನಾಡು ಸೇರಿದಂತೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದೆ ಅನ್ನೋದನ್ನ ಹವಾಮಾನ ಇಲಾಖೆ ತಿಳಿಸಿದ್ದು ಸ್ಥಳೀಯ ಜನರು ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಭಾರತೀಯ ಹವಾಮಾನ ಇಲಾಖೆ ತಿಳಿಸಿರುವ ಪ್ರಕಾರ 65 ರಿಂದ 115 ಮೀ. ಮೀ ಮಳೆಯಾಗಲಿದೆ ಎಂದು ತಿಳಿಸಿದೆ.

ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ?
ತುಮಕೂರು, ಮಂಡ್ಯ, ಚಿತ್ರದುರ್ಗ, ಶಿವಮೊಗ್ಗ, ಉಡುಪಿ ದಕ್ಷಿಣ ಕನ್ನಡ ಉತ್ತರ ಕನ್ನಡ ಮಲೆನಾಡು ಜಿಲ್ಲೆಗಳು ಚಿಕ್ಕ ಮಂಗಳೂರು, ಹಾಸನ, ಕೊಡಗು, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕಲಬುರುಗಿ, ವಿಜಯಪುರ, ದಕ್ಷಿಣ ಒಳನಾಡು ಬಳ್ಳಾರಿ, ದಾವಣಗೆರೆ, ಬೆಂಗಳೂರು ಚಾಮರಾಜನಗರ, ಚಿಕ್ಕಬಳ್ಳಾಪುರ, ಮೈಸೂರು ಕಡೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here