ಹೌದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರತಿ ವರ್ಷ 6 ಸಾವಿರ ರು. ನಗದು ನೀಡುವ ಸಲುವಾಗಿ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ’ ಯೋಜನೆಯನ್ನು ಶುಕ್ರವಾರವಷ್ಟೇ ಬಜೆಟ್‌ನಲ್ಲಿ ಪ್ರಕಟಿಸಿದ್ದ ಕೇಂದ್ರ ಸರ್ಕಾರ, ಅದನ್ನು ತ್ವರಿತವಾಗಿ ತರಲು ತಕ್ಷಣದಿಂದಲೇ ಭರದ ಸಿದ್ಧತೆ ಆರಂಭಿಸಿದೆ.

ಹಣಕಾಸು ಸಚಿವ ಪೀಯೂಷ್‌ ಗೋಯಲ್‌ ಅವರು ಬಜೆಟ್‌ನಲ್ಲಿ ಈ ಯೋಜನೆ ಘೋಷಣೆ ಮಾಡಿದ ದಿನವೇ, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಕೃಷಿ ಇಲಾಖೆ ಕಾರ್ಯದರ್ಶಿಗಳು ಪತ್ರ ಬರೆದು, ಆದಷ್ಟುಬೇಗನೆ ಫಲಾನುಭವಿಗಳನ್ನು ಗುರುತಿಸುವಂತೆ ಸೂಚನೆ ನೀಡಿದ್ದಾರೆ.

ತಲಾ 2 ಸಾವಿರ ರು.ನಂತೆ 3 ಕಂತುಗಳಲ್ಲಿ ರೈತರ ಬ್ಯಾಂಕ್‌ ಖಾತೆಗೆ ಹಣ ಜಮೆ ಮಾಡುವ ಯೋಜನೆ ಇದಾಗಿದೆ. ಮೊದಲ ಕಂತು ಮಾ.31ರೊಳಗೆ ರೈತರ ಖಾತೆ ತಲುಪಬೇಕಾಗಿದೆ. ಈ ಹಿನ್ನೆಲೆಯಲ್ಲಿ ಫಲಾನುಭವಿಗಳನ್ನು ಗುರುತಿಸುವಂತೆ ರಾಜ್ಯಗಳಿಗೆ ಸಂದೇಶ ರವಾನಿಸಿದೆ.

ಪ್ರತಿ ಗ್ರಾಮದಲ್ಲೂ ಅರ್ಹ ಫಲಾನುಭವಿಯ ಹೆಸರು, ಲಿಂಗ ಹಾಗೂ ಆತ/ಆಕೆ ಎಸ್ಸಿ ಅಥವಾ ಎಸ್ಟಿ ಸಮುದಾಯಕ್ಕೆ ಸೇರಿದ್ದಾರೆಯೇ.? ಎಂಬ ಮಾಹಿತಿಯನ್ನು ಸಂಗ್ರಹಿಸುವಂತೆ ರಾಜ್ಯಗಳಿಗೆ ಬರೆದಿರುವ ಪತ್ರದಲ್ಲಿ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಈ ಫಲಾನುಭವಿಗಳ ಹೆಸರನ್ನು ಗ್ರಾಮ ಪಂಚಾಯಿತಿ ನೋಟಿಸ್‌ ಬೋರ್ಡ್‌ನಲ್ಲಿ ಫಲಕ ಪ್ರಕಟಿಸಲಾಗುತ್ತದೆ’ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಈ ವಿಚಾರವನ್ನು ನಮ್ಮ ರೈತ ಬಾಂಧವರಿಗೆ ತಿಳಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಲಿ, ಅಷ್ಟೇ ಅಲ್ಲದೆ ಪ್ರತಿದಿನ ಸರ್ಕಾರದ ಯೋಜನೆಗಳನ್ನು ತಿಳಿಯಲು ಹಾಗು ಉಪಯುಕ್ತ ವಿಷಯಗಳನ್ನು ತಿಳಿಯಲು ಮರೆಯದೆ ನಮ್ಮ ಪೇಜ್ ಅನ್ನು ಬೆಂಬಲಿಸಿ..

LEAVE A REPLY

Please enter your comment!
Please enter your name here