ಪ್ರವಾಹದಿಂದ ರಾಜ್ಯದಲ್ಲಿ ಹಲವು ನಷ್ಟಗಳಾಗಿದ್ದು, ಇದಕ್ಕೆ ಸರ್ಕಾರ ಪರಿಹಾರ ಮಾರ್ಗವನ್ನು ರೂಪಿಸುವುದಕ್ಕೆ ಯೋಜನೆ ಹಾಕಿಕೊಂಡಿದೆ, ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ತಾತ್ಕಾಲಿಕ ಪರಿಹಾರವಾಗಿ ಒಂದು ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳೂರಿನ ಕುಕ್ಕಾವಿನಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 275 ಮನೆಗಳು ಸಂಪೂರ್ಣವಾಗಿ ಹಾಳಾಗಿದ್ದು, ಅವರಿಗೆ ಮನೆ ಕಟ್ಟಲು 5 ಲಕ್ಷ ರೂ. ನೀಡಲಾಗುವುದು. ಅಲ್ಲಿಯವರೆಗೂ ಮಳೆ ಕಳೆದುಕೊಂಡ ಸಂತ್ರಸ್ತರು ಹೊಸ ಮನೆ ನಿರ್ಮಿಸುವವರಿಗೆ ಪ್ರತಿ ತಿಂಗಳು 5 ಸಾವಿರ ರೂ. ಬಾಡಿಗೆ ಪಾವತಿಸಲಾಗುವುದು. ಹಾಳಾಗಿರುವ ಮನೆಗಳ ದುರಸ್ತಿಗೆ 1 ಲಕ್ಷ ರೂ. ನೀಡಲಾಗುವುದು ಎಂದು ತಿಳಿಸಿದರು.

ಅಷ್ಟೇ ಅಲ್ಲದೆ ಸದ್ಯ ಕೃಷಿಯ ನಷ್ಟದ ಲೆಕ್ಕಾಚಾರ ನಡೆಯುತ್ತಿದೆ. ಬೆಳೆ ನಾಶಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡುತ್ತೇವೆ. ಸಂತ್ರಸ್ತರಿಗೆ ಉಚಿತ ನಿವೇಶನ ನೀಡಲಾಗುವುದು. ಈಗಾಗಲೇ ಇದಕ್ಕಾಗಿ ಸರ್ಕಾರಿ ಭೂಮಿ ಗುರುತಿಸಲು ಸೂಚಿಸಿದ್ದೇನೆ. ಈ ಬಗ್ಗೆ ಜಿಲ್ಲಾಧಿಕಾರಿ, ತಹಸೀಲ್ದಾರ್​ಗೆ ಸೂಚಿಸಿದ್ದೇನೆ ಎಂದು ಹೇಳಿದರು.

LEAVE A REPLY

Please enter your comment!
Please enter your name here