ಸಾಮಾನ್ಯವಾಗಿ ಈ ಗಿಡದ ಪರಿಚಯ ಹಳ್ಳಿ ಜನಕ್ಕೆ ಇದ್ದೆ ಇರುತ್ತದೆ ಯಾಕೆಂದರೆ ಈ ಗಿಡವನ್ನು ಪ್ರತಿ ನಿತ್ಯ ನೋಡುತ್ತಿರುತ್ತಾರೆ. ಈ ಗಿಡದಲ್ಲಿ ಹಲವು ಔಷದಿಯ ಗುಣಗಳಿವೆ ಹಾಗು ಇದನ್ನು ಮನೆಮದ್ದುಗಳ ಬಳಕೆಯಲ್ಲಿ ಬಳಸಲಾಗುತ್ತದೆ. ಅಷ್ಟಕ್ಕೂ ಈ ಗಿಡವನ್ನು ಕುಪ್ಪಿಗಿಡ ಎಂಬುದಾಗಿ ಕರೆಯಲಾಗುತ್ತದೆ.

ಈ ಗಿಡದಲ್ಲಿ ಯಾವೆಲ್ಲ ಔಷದಿಯ ಗುಣಗಳಿವೆ ಅನ್ನೋದನ್ನ ಮುಂದೆ ನೋಡಿ.
ತುರಿಕೆ, ಕಜ್ಜಿಗೆ: ಹಸೀ ಎಲೆಗಳನ್ನು ತಂದು, ಸ್ವಲ್ಪ ಅಡಿಗೆ ಉಪ್ಪು ಸೇರಿಸಿ ನುಣ್ಣಗೆ ಕಲ್ಪತ್ತಿನಲ್ಲಿ ಅರೆದು ಪಟ್ಟು ಹಾಕುವುದು. ಸಿಪಲಿಸ್ ಎನ್ನುವ ಮರ್ಮಾಂಗ ಹುಣ್ಣಿಗೆ ಸಹ ಇದೇ ರೀತಿ ಚಿಕಿತ್ಸೆ ಮಾಡುವುದು.

ಇತ್ತೀಚಿನ ದಿನಗಳಲ್ಲಿ ಸಾಮನ್ಯವಾಗಿ ಕಾಡುವ ಮಲಬದ್ದತೆಗೆ:ಮಕ್ಕಳು ಮಲಬದ್ಧತೆಯಾಗಿ ಅಳುತ್ತಿದ್ದರೆ ಹಸೀ ಎಲೆಗಳನ್ನು ತಂದು ಚೆನ್ನಾಗಿ ತೊಳೆದು ಜಜ್ಜಿ ಸ್ವಲ್ಪ ಭಾಗವನ್ನು ಮಲದ್ವಾರದಲ್ಲಿ ಸೇರಿಸುವುದು.

ಮಕ್ಕಳ ಶೀತ ವ್ಯಾಧಿಗೆ: ಹಸೀ ಎಲೆಗಳ ರಸವನ್ನು ಸ್ವಲ್ಪ ಜೇನು ಸೇರಿಸಿ ನೆಕ್ಕುವುದು. ಮೊದಲು ಸ್ವಲ್ಪ ವಾಂತಿಯಾಗಿ, ನಂತರ ವಾಸಿಯಾಗುವುದು. ಈ ರಸ ಸೇವಿಸುವುದರಿಂದ ದೊಡ್ಡವರಲ್ಲಿ ಕೆಮ್ಮು, ಕಫ, ದಮ್ಮು ಗುಣವಾಗುವುದು.

ಮಕ್ಕಳ ಹೊಟ್ಟೆನೋವಿಗೆ: ಬೆಳ್ಳುಳ್ಳಿ ಮೆಣಸು ಇವುಗಳ ಸಮತೂಕದ ಎರಡು ಭಾಗ ಕುಪ್ಪಿ ಸೊಪ್ಪನ್ನು ಸೇರಿಸಿ, ನುಣ್ಣಗೆ ಅರೆದು, ಸ್ವಲ್ಪ ಭಾಗವನ್ನು ಹಾಲಿನಲ್ಲಿ ಕದಡಿ ಕುಡಿಸುವುದು.

ಮೂರ್ಛೆಗೆ: ಹಸೀ ಕುಪ್ಪಿ ಎಲೆಗಳ ರಸವನ್ನು ಮೂಗಿನ ಎರಡೂ ಹೊಳ್ಳೆಗಳಿಗೆ ತೊಟ್ಟು ತೊಟ್ಟಾಗಿ ಬಿಡುವುದು.ಬಹು ಬೇಗ ಪ್ರಜ್ಞೆ ಬಂದು ಎಚ್ಚರವಾಗುವುದು.

LEAVE A REPLY

Please enter your comment!
Please enter your name here