ಮೇಷ
ಈ ದಿನ ಹಣಕಾಸಿನ ಹರಿವಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು.

ವೃಷಭ
ಈ ದಿನ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ.

ಮಿಥುನ
ಈ ದಿನ ಕೆಲವು ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ. ಕುಲದೇವತಾ ಸ್ಮರಣೆ ಮಾಡಿರಿ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.

ಕರ್ಕಾಟಕ
ಈ ದಿನ ನೀವು ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಿ ಸಂಗಾತಿಯಿಂದ ದೂರ ಇರುವುದು ಒಳ್ಳೆಯದಲ್ಲ. ನೀವು ಆಡುವ ಮಾತುಗಳನ್ನು ಇನ್ನೊಬ್ಬರೂ ಅಷ್ಟೇ ಗಹನವಾಗಿ ಚಿಂತಿಸುತ್ತಾರೆ ಎಂಬುದನ್ನು ತಿಳಿಯಿರಿ.

ಸಿಂಹ
ತಾಯಿಯ ಸುಖ ಮತ್ತು ವಾಹನ ಸುಖ ದೊರೆಯುವುದಾದರೂ ಸಂಗಾತಿಯ ಅಸಹಕಾರ ನಿಮ್ಮ ಮನೋಚಿಂತನೆಯನ್ನು ಹೆಚ್ಚಿಸುವುದು. ಮನೋನಿಯಾಮಕ ರುದ್ರ ದೇವರನ್ನು ಭಜಿಸಿ, ಒಳಿತಾಗುವುದು.

ಕನ್ಯಾ
ಈ ದಿನ ಹಣಕಾಸಿನ ತೊಂದರೆ ಇರುವುದಿಲ್ಲ. ಬಾಳಸಂಗಾತಿಯೊಡನೆ ಚರ್ಚಿಸಿ ಸಲಹೆ ಪಡೆಯಲು ಸಕಾಲವಾಗಿದೆ. ನೀವಾಡುವ ಮಾತು ಇತರರಿಗೆ ರುಚಿಸುವುದಿಲ್ಲ. ಆರೋಗ್ಯದ ಸಲುವಾಗಿ ಗಣಪತಿಯನ್ನು ಪ್ರಾರ್ಥಿಸಿ.

ತುಲಾ
ನೀವು ಸಮಾಜದಲ್ಲಿ ಗಳಿಸುತ್ತಿರುವ ಗೌರವ, ಆದರಗಳನ್ನು ಕಂಡು ಇತರರು ಹೊಟ್ಟೆಕಿಚ್ಚು ಪಡುವರು. ನಿಮ್ಮ ಬಗ್ಗೆ ದೂರು ಹೇಳಿದರೆ ನಕ್ಕು ಸುಮ್ಮನಾಗಿ.

ವೃಶ್ಚಿಕ
ನೀವು ನಿಮ್ಮ ಮಕ್ಕಳ ಮೇಲೆ ಇಟ್ಟಿರುವ ಭರವಸೆ ಕಾರ್ಯರೂಪಕ್ಕೆ ಬರುವುದು. ಸಾಲದ ತೀರುವಳಿ ಮಾಡಿದಲ್ಲಿ ಅನುಕೂಲವಾಗುವುದು. ಭಗವಂತನ ಕೃಪೆ ಇದ್ದಲ್ಲಿ ನಿಮ್ಮನ್ನು ಜನರು ಹಾಡಿ ಕೊಂಡಾಡುವರು.

ಧನು
ವ್ಯಾಪಾರ, ವ್ಯವಹಾರ ಎಂದರೆ ಲಾಭ ನಷ್ಟ ಇದ್ದದ್ದೇ. ಎಲ್ಲಾ ಕಾಲದಲ್ಲೂ ಲಾಭವೇ ಆಗುತ್ತದೆ ಎಂದು ತಿಳಿಯಬಾರದು. ಮುಷ್ಟಿ ಕಾಳು ಚೆಲ್ಲಿ ಮೂಟೆ ಕಾಳನ್ನು ಪಡೆಯುವಂತೆ ನಿಮ್ಮ ಹಣ ಖರ್ಚಾಗುವುದು. ಆದರೂ ಮುಂದೆ ಒಳಿತಾಗುವುದು.

ಮಕರ
ಈ ದಿನ ಮಾತು ಬಲ್ಲವನಿಗೆ ಜಗಳವಿಲ್ಲ ಎಂದರು ಹಿರಿಯರು. ನೀವಾಡುವ ಮಾತುಗಳು ಮತ್ತೊಬ್ಬರಿಗೆ ನೋವನ್ನುಂಟು ಮಾಡುವುದು. ಈ ಬಗ್ಗೆ ಜಾಗ್ರತೆ ಇರಲಿ. ಆರೋಗ್ಯದ ಕಡೆ ಗಮನ ಇರಲಿ.

ಕುಂಭ
ಈ ದಿನ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಓದು ಮುಂದುವರಿಕೆಯ ಬಗ್ಗೆ ಚಿಂತನೆ ನಡೆಸುವಿರಿ. ಸಹಜವಾಗಿಯೇ ಕೆಲವರು ವಿರೋಧಿಸುವ ಜನ ಇರುತ್ತಾರೆ. ಅವರ ಟೀಕೆಗಳಿಗೆ ಕಿವಿಗೊಡದಿರಿ.

ಮೀನ
ಈ ದಿನ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.

LEAVE A REPLY

Please enter your comment!
Please enter your name here