ಸೋಮವಾರ ರಾತ್ರಿ ಮಂಗಳೂರು ಸಮೀಪದ ನೇತ್ರಾವತಿ ನದಿ ಸೇತುವೇ ಮೇಲೆ ನಿಗೂಢವಾಗಿ ಕಾಣೆಯಾಗಿದ್ದ ಸಿದ್ದಾರ್ಥ ಅವರ ಮೃತದೇಹ ಬುಧವಾರ ಮುಂಜಾನೆ ಪತ್ತೆಯಾಗಿದೆ. ಸರಿಸುಮಾರು 36 ಗಂಟೆಗಳ ತೀವ್ರ ಶೋಧದ ನಂತರ ಹೊಯ್ಗೆ ಬಜಾರ್‌ನ ಅಳಿವೆ (ನದಿ ಮತ್ತು ಸಮುದ್ರ ಸೇರುವ ಸ್ಥಳ) ಬಾಗಿಲ ಬಳಿ ಬುಧವಾರ ಬೆಳಗ್ಗೆ 6.30ಕ್ಕೆ ಸಿದ್ದಾರ್ಥ್‌ ಅವರ ದೇಹ ಪತ್ತೆಯಾಗಿದೆ. ಮೃತದೇಹವನ್ನು ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲಿ ಅವರ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಸ್ಥಳೀಯ ಮೀನುಗಾರರು ಬೆಳಗ್ಗೆ ಮೀನುಗಾರಿಕೆಗೆಂದು ತೆರಳಿದ್ದಾಗ ನದಿ ದಡದಲ್ಲಿ ಮೃತದೇಹ ಕಂಡಿದೆ. ಇದು ಸಿದ್ಧಾರ್ಥ ಅವರ ಮೃತದೇಹವೇ ಇರಬಹುದೇ ಎಂಬ ಸಂಶಯದೊಂದಿಗೆ ಹತ್ತಿರಕ್ಕೆ ತೆರಳಿದ ಮೀನುಗಾರರಿಗೆ ಆ ದೇಹ ಸಿದ್ಧಾರ್ಥ ಅವರದ್ದೇ ಎಂದು ಖಚಿತವಾಗಿದೆ.

ಈ ಕುರಿತು ಮಾತನಾಡಿರುವ ಮಂಗಳೂರು ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌, ಇಂದು ಮುಂಜಾನೆ 6.30ರಲ್ಲಿ ಮೃತದೇಹ ಪತ್ತೆಯಾಯಿತು. ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಮುಂದಿನ ವಿಧಿ ವಿಧಾನಗಳ ಬಗ್ಗೆ ಕುಟುಂಬ ಸದಸ್ಯರು ನಿರ್ಧರಿಸುತ್ತಾರೆ. ದೇಹವನ್ನು ವೆನ್‌ಲಾಕ್‌ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here