ರಾಮನ ಪರಮ ಭಕ್ತ ಆಂಜನೇಯ. ಹಲವು ಹೆಸರುಗಳಿಂದ ಕರೆಯಲ್ಪಡುವ ಹನುಮನ ಕೃಪೆ ಹಾಗು ಮಹಿಮೆ ಅಪಾರ. ಆಂಜನೇಯ ದೇವಾಲಯ ಬೆಂಗಳೂರು ಮಹಾನಗರದ ಮೈಸೂರು ರಸ್ತೆಯಲ್ಲಿರುವ ಪ್ರತಿಷ್ಠಿತ ದೇವಲಾಯಗಳಲ್ಲಿ ಶ್ರೀ ಗಾಳಿ ಆಂಜನೇಯ ದೇವಸ್ಥಾನವೂ ಒಂದು. ಮಾರುತಿ, ಪವನಪುತ್ರ, ಸುಂದರ, ವಾಯುಪುತ್ರ, ರಾಮಪ್ರಿಯ, ಹನುಮ, ಹನುಮಂತ ಕೇಸರಿ ಎಂಬ ನಾನಾ ಹೆಸರುಗಳಿಂದ ಕರೆಯಲ್ಪಡುವ ಹನುಮಂತ ವಾಯುಪುತ್ರನಾಗಿರುವುದರಿಂದ ಇಲ್ಲಿನ ಹನುಮ ದೇವಸ್ಥಾನಕ್ಕೆ ಗಾಳಿ ಆಂಜನೇಯ ಎಂಬ ಹೆಸರು ಬಂದಿದೆ. ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆಯೆಂದು ಹನುಮಂತನನ್ನು ಭಕ್ತಿಯಿಂದ ದಿನನಿತ್ಯ ಪೂಜಿಸಲಾಗುತ್ತದೆ.

ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವುದರಿಂದ ಮನೆಯಲ್ಲಿನ ಕಷ್ಟಗಳು ದೂರಾಗುತ್ತವೆ ಹಾಗೂ ಮನೆಯಲ್ಲಿ ದುಷ್ಟಶಕ್ತಿಗಳು ಸುಳಿಯುವುದಿಲ್ಲ, ಮಕ್ಕಳು ಚಂಡಿ ಹಿಡಿದರೆ ದೇವಸ್ಥಾನಕ್ಕೆ ಭೇಟಿ ನೀಡಿ ತಾಯತ ಹಾಕಿಸಿಕೊಳ್ಳುವುದರಿಂದ ಮಕ್ಕಳಲ್ಲಿರುವ ಗೊಂದಲ ಹಾಗೂ ತೊಂದರೆಗಳು ಇಲ್ಲವಾದಂತೆ ಆಗುತ್ತದೆ. ಈ ಆಂಜನೇಯನನ್ನು ಪ್ರಾರ್ಥಿಸುವುದರಿಂದ ಗಾಳಿ ಹಿಡಿಯುವುದು ಅಂದರೆ ಭೂತ ಪಿಶಾಚಿಗಳ ಮುಷ್ಟಿಗೆ ಒಳಪಡುವುದರಿಂದ ಮುಕ್ತಿ ಪಡೆಯಬಹುದು ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.

ವಾಹನ, ಮನೆಯ ಮೇಲೆ ಬೀಳುವ ದೃಷ್ಟಿಯನ್ನು ಗಾಳಿ ಆಂಜನೇಯ ಸ್ವಾಮಿ ದೂರ ಮಾಡುತ್ತಾನೆಂಬ ನಂಬಿಕೆಯಿಂದಲೇ ಪ್ರತೀ ನಿತ್ಯ ಇಲ್ಲಿನ ಜನ ನೂರಾರು ಸಂಖ್ಯೆಯಲ್ಲಿ ಬಂದು ತಮ್ಮ ವಾಹನಗಳಿಗೆ ಪೂಜೆ ಮಾಡಿಸುತ್ತಾರೆ. ದೇವರಿಗೆ ಪೂಜೆ ಮಾಡಿಸಿ ಇಲ್ಲಿ ನೀಡುವ ಆಂಜನೇಯ ಸ್ವಾಮಿ ಬಂಡಾರ ಹಾಗೂ ಫಲವನ್ನು ಮನೆಗೆ ತೆಗೆದುಕೊಂಡು ಹೋಗಿ ಮನೆಯ ಇತರೆ ಸದಸ್ಯರಿಗೆ ನೀಡುತ್ತಾರೆ. ಇದಲ್ಲದೆ ಇಲ್ಲಿಗೆ ಬರುವ ಜನರು ತಮ್ಮ ಕಷ್ಟವನ್ನು ದೂರಮಾಡುವಂತೆ ಹರಕೆ ಹೊತ್ತು, ಬಯಕೆ ಈಡೇರಿದ ಮೇಲೆ ಹರಕೆಯನ್ನು ತೀರಿಸುತ್ತಾರೆ.

ದೇಗುಲಕ್ಕೆ ಹೋಗುವುದು ಹೇಗೆ..?
ಗಾಳಿ ಆಂಜನೇಯ ದೇವಸ್ಥಾನ, ಮೈಸೂರು ರಸ್ತೆ, ಬಾಪೂಜಿನಗರ (ಬ್ಯಾಟರಾಯನ ಪುರ), ಬೆಂಗಳೂರು-560026.
ಮೆಜೆಸ್ಟಿಕ್-ಬಾಪೂಜಿನಗರದ ನಡುವಿನ ಅಂತರ 6.5 ಕಿಮಿ.ಇದ್ದು, ಹೋಗಲು ಕನಿಷ್ಟ ಎಂದರೂ 19 ನಿಮಿಷ ಬೇಕಾಗುತ್ತದೆ. ಮೆಜೆಸ್ಟಿಕ್ ಗೆ ಹೋಗಿ ಅಲ್ಲಿ ಫ್ಲಾಟ್ ಫಾರ್ಮ್ ನಂಬರ್ 19 ಕ್ಕೆ ಬಂದರೆ ಅಲ್ಲಿಂದ (ಬಿಎಂಟಿಸಿ) 222, 225, 248 ಬಸ್ ಗಳು ಹೋಗುತ್ತದೆ

LEAVE A REPLY

Please enter your comment!
Please enter your name here