ಉದ್ಯೋದಗ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಸುವರ್ಣಾವಕಾಶ ನೋಡಿ..

0

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿ ಇವರ ಕಡೆಯಿಂದ ವಾರ್ಡ್ ಬಾಯ್, ವಾರ್ಡನ್ ಹಾಗೂ ಮೆಸ್ ಸಹಾಯಕ ಈ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ವೇತನ ಈ ಎಲ್ಲದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

2021ನೇ ಸಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿ ಉಜಿರೆ, ದಕ್ಷಿಣ ಕನ್ನಡ ಇಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. SDM ಬೆಂಗಳೂರು, ಹಾಸನ ಮತ್ತು ಉಡುಪಿಯ ಆಯುರ್ವೇದ ಕಾಲೇಜ್ ಮತ್ತು ಆಸ್ಪತ್ರೆಗಳಲ್ಲಿ ನೇಮಕಾತಿ ನಡೆಯುತ್ತಿದೆ. ಪಂಚಕರ್ಮ ಸಹಾಯಕ, ವಾರ್ಡ್ ಬಾಯ್, ಮೆಸ್ ಸಹಾಯಕ,

ತೋಟಗಾರ, ಲ್ಯಾಬ್ ತಂತ್ರಜ್ಞ, ನರ್ಸ್, ವಾರ್ಡನ್, ಎಂಜಿನಿಯರ್, ಯೋಗ ಶಿಕ್ಷಕ, ಸಹಾಯಕ, ಪ್ರಾಧ್ಯಾಪಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಮೊದಲಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಿದ್ಯಾರ್ಹತೆ ಎಷ್ಟಿರಬೇಕು ಎಂದು ನೋಡುವುದಾದರೆ, ಅಭ್ಯರ್ಥಿಗಳು ಹತ್ತನೇತರಗತಿ ಪಾಸ್ ಅಥವಾ ಫೇಲ್ ಆಗಿದ್ದರೂ ಚಿಂತೆ ಇಲ್ಲ, PUC , ITI, ಡಿಪ್ಲೊಮಾ , ನರ್ಸಿಂಗ್, MD, MS ಓದಿರಬೇಕು.

ಯಾವುದೇ ಹೊಸ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ನೋಡುವುದಾದರೆ, ಕನಿಷ್ಠ ಹದಿನೆಂಟು ವರ್ಷ ದಾಟಿರಬೇಕು. ಆನ್ಲೈನ್ ಅರ್ಜಿ ಸಲ್ಲಿಸುವುದಾಗಿರುತ್ತದೆ. ಪ್ರಮುಖ ದಿನಾಂಕಗಳನ್ನು ನೋಡುವುದಾದರೆ, ಅರ್ಜಿ ಸಲ್ಲಿಸಲು ಆರಂಭದ ದಿನಾಂಕ 13/10/2021 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23/10/2021 ಆಗಿರುತ್ತದೆ.

ಉದ್ಯೋಗ ಸ್ಥಳ ಬೆಂಗಳೂರು, ಹಾಸನ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳು ಮತ್ತು ಫೋಟೋ ಸಮೇತ ಇಮೇಲ್ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ಇದರ ಕುರಿತಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿ ಪತ್ರಿಕೆಯಲ್ಲಿ ಜಾಹೀರಾತು ನೀಡಲಾಗಿದೆ.

ಇಮೇಲ್ ಐಡಿ – [email protected]. ಈ ಇಮೇಲ್ ವಿಳಾಸಕ್ಕೆ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.

Leave A Reply

Your email address will not be published.

error: Content is protected !!