ನಾವಿಂದು ಗ್ರಾಮ ಪಂಚಾಯಿತಿ ಚುನಾವಣೆಗೆ ಯಾರು ಸ್ಪರ್ಧಿಸಬಹುದು ಯಾರು ಸ್ಪರ್ಧಿಸುವಂತಿಲ್ಲ ಎಂಬುದರ ಕುರಿತಾದ ಮಾಹಿತಿಯನ್ನು ತಿಳಿದುಕೊಳ್ಳೋಣ. ಗ್ರಾಮ ಪಂಚಾಯಿತಿ ಚುನಾವಣೆಗೆ ಗ್ರಾಮಸಹಾಯಕರು ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಅಂಗನವಾಡಿ ಕಾರ್ಯಕರ್ತರು ಬಿಸಿಯೂಟ ಯೋಜನೆಯಡಿ ನೇಮಕಗೊಂಡ ಅಡುಗೆ ಮಾಡುವವರು ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಬಹುದು.
ಗಂಡ ಸರ್ಕಾರಿ ನೌಕರಿಯಲ್ಲಿದ್ದರೆ ಹೆಂಡತಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಅದೇರೀತಿ ಹೆಂಡತಿ ಸರ್ಕಾರಿ ನೌಕರಿಯಲ್ಲಿದ್ದರೆ ಗಂಡ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಇದರ ಜೊತೆಗೆ ರೈತರು ಕೂಡ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಅದರ ಜೊತೆಗೆ ಉದ್ಯೋಗವಿಲ್ಲದೆ ಇರುವ ನಿರುದ್ಯೋಗ ಯುವಕರು ಕೂಡಾ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಬಹುದಾಗಿದೆ.
ಅಷ್ಟೇ ಅಲ್ಲ ಮಂಗಳಮುಖಿಯರು ಕೂಡ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಆದರೆ ನಾಮಪತ್ರದಲ್ಲಿ ಅವರು ಮಹಿಳೆ ಎಂದು ಘೋಷಿಸಿಕೊಂಡಲ್ಲಿ ಮಹಿಳೆ ಎಂದು ಇಲ್ಲವಾದಲ್ಲಿ ಪುರುಷ ಎಂದು ಭಾವಿಸತಕ್ಕದ್ದು.
ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿರುವಂತಹ ವ್ಯಕ್ತಿ ಒಂದುವೇಳೆ ಆ ಕೆಲಸದಿಂದ ಡಿಸ್ ಮಿಸ್ ಆದರೆ ಅಂತಹ ವ್ಯಕ್ತಿಗಳು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಗ್ರಾಮ ಪಂಚಾಯಿತಿಗೆ ತುಂಬ ಬೇಕಾದಂತಹ ಬಾಕಿಯನ್ನು ಹಾಗೇ ಉಳಿಸಿಕೊಂಡಿರುವಂತಹ ವ್ಯಕ್ತಿಗಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.
ನೊಂದಾಯಿತ ಗುತ್ತಿಗೆದಾರರು ಈಗ ಗ್ರಾಮಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಅಂತವರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಅನರ್ಹರಾಗಿರುತ್ತಾರೆ. ಇದಿಷ್ಟು ಗ್ರಾಮ ಪಂಚಾಯಿತಿ ಚುನಾವಣೆಗೆ ಯಾರು ಸ್ಪರ್ಧಿಸಬಹುದು ಯಾರು ಸ್ಪರ್ಧಿಸುವುದಕ್ಕೆ ಅನರ್ಹರಾಗಿರುತ್ತಾರೆ ಎಂಬುದರ ಕುರಿತಾದ ಮಾಹಿತಿಯಾಗಿದೆ. ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರ ಜೊತೆಗೆ ನಿಮ್ಮ ಸ್ನೇಹಿತರು ಹಾಗೂ ಪರಿಚಿತರಿಗು ತಿಳಿಸಿರಿ.