ಪುನೀತ್ ರಾಜಕುಮಾರ್ ಅವರ ನಿಜವಾದ ಗುಣ ಏನು ಗೋತ್ತಾ?

0

ಪುನೀತ್ ರಾಜಕುಮಾರ್ ಭಾರತೀಯ ಚಿತ್ರನಟ ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕ. ಪ್ರಾಥಮಿಕವಾಗಿ ಕನ್ನಡ ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಾರೆ. ಪುನೀತ್ 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ. ಪುನೀತ್ ರಾಜಕುಮಾರ್ ಪಾರ್ವತಮ್ಮ ರಾಜಕುಮಾರ್ ಅವರ ಮಗನಾಗಿ ಜನಿಸಿದರು. ಇವರು ರಾಜಕುಮಾರ್ ದಂಪತಿಯ ಕಿರಿಯ ಮಗ. ನಟರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಸಹೋದರರು. ಪುನೀತ್ ರಾಜಕುಮಾರ್ ಅವರ ವ್ಯಕ್ತಿತ್ವದ ಬಗ್ಗೆ ನಾವಿಲ್ಲಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.

ಪುನೀತ್ ಆರು ವರ್ಷದವರಿದ್ದಾಗ ಅವರ ಕುಟುಂಬ ಬೆಂಗಳೂರಿಗೆ ತೆರಳಿತು. ಅವರು ಹತ್ತು ವರ್ಷ ವಯಸ್ಸಿನ ತನಕ ಅವರ ತಂದೆ ಅವರನ್ನು ಮತ್ತು ಅವರ ಸಹೋದರಿ ಪೂರ್ಣಿಮಾರನ್ನು ಚಲನಚಿತ್ರದ ಸೆಟ್ಗೆ ಕರೆದುಕೊಂಡು ಹೋಗುತ್ತಿದ್ದರು. ಪುನೀತ್ ಡಿಸೆಂಬರ್ 1 1999 ರಂದು ಅಶ್ವಿನಿ ರೇವಂತ್ ರನ್ನು ವಿವಾಹವಾದರು. ಇವರಿಗೆ ಇಬ್ಬರು ಪುತ್ರಿಯರಿದ್ದಾರೆ. ದ್ರಿತಿ ಮತ್ತು ವಂದಿತಾ. ಇವರ ಮೊದಲ ಹೆಸರು ಮಾ.ಲೋಹಿತ್.

ಪುನೀತ್ ರಾಜಕುಮಾರ್ ಅವರು ಬಾಲ್ಯದಿಂದಲೇ ಸಿನಿಮಾ ರಂಗವನ್ನು ಪ್ರವೇಶಿಸಿದ್ದಾರೆ. ತಂದೆ ರಾಜಕುಮಾರ್ ಅವರ ಜೊತೆಯಲ್ಲಿ ಹಲವಾರು ಚಿತ್ರಗಳಲ್ಲಿ ಅಭಿನಯಿಸಿ ಜನರ ಪ್ರೀತಿ ಮೆಚ್ಚುಗೆಯನ್ನು ಪಡೆದಿದ್ದಾರೆ. ಪುನೀತ್ ರಾಜಕುಮಾರ್ ಅವರು ರಾಜಕುಮಾರ್ ಅವರಂತೆಯೇ ಸರಳ ವ್ಯಕ್ತಿತ್ವದ ಸಹೃದಯಿ ವ್ಯಕ್ತಿಯಾಗಿದ್ದಾರೆ. ಪ್ರತಿಯೊಂದು ವಿಚಾರಗಳಿಗೂ ಸ್ಪಂದಿಸುವ ಮನೋಭಾವವನ್ನು ಇವರು ಹೊಂದಿದ್ದಾರೆ.

ಪುನೀತ್ ರಾಜಕುಮಾರ್ ಅವರ ಸರಳತೆ ಸಜ್ಜನತೆ ಅಪಾರ ಪ್ರೀತಿ ಅವರನ್ನು ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಿ ನಿಲ್ಲಿಸಿದೆ. ಅವರಿಗಿರುವ ಅಭಿಮಾನಿ ಸಮೂಹ ಬಹಳ ದೊಡ್ಡದಿದೆ. ಹೇಳಬೇಕೆಂದರೆ ಡಾ. ರಾಜ್ ಕುಮಾರ್ ಅವರನ್ನೇ ಹೋಲುತ್ತಿದೆ ಪುನೀತ್‌ ಅವರ ವ್ಯಕ್ತಿತ್ವ. ಪುನೀತ್ ಅವರು ಪ್ರಸಿದ್ಧ ಟಿವಿ ಪ್ರದರ್ಶನ ಕನ್ನಡದ ಕೋಟ್ಯಾಧಿಪತಿ, ಹೂ ವಾಂಟ್ಸ್ ಟು ಬಿ ಮಿಲಿಯನೇರ್ ಎಂಬ ಕನ್ನಡ ಆವೃತ್ತಿಯ ಟೆಲಿವಿಷನ್ ಶೋ ನಿರೂಪಣೆ ಮಾಡಿದ್ದಾರೆ.

Leave A Reply

Your email address will not be published.

error: Content is protected !!