ಬ್ಯಾಂಕ್ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಸುವರ್ಣಾವಕಾಶ

0

ಬ್ಯಾಂಕಿನಲ್ಲಿ ಉದ್ಯೋಗ ಮಾಡಬೇಕು ಎಂದು ಆಸೆಯನ್ನು ಇಟ್ಟುಕೊಂಡು ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ನಾವು ಇಂದು ಸಿಹಿ ಸುದ್ದಿಯನ್ನು ತಿಳಿಸಿಕೊಡುತ್ತಿದ್ದೇವೆ. ಬ್ಯಾಂಕ್ ಆಫ್ ಮಹಾರಾಷ್ಟ್ರ ದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವುದಕ್ಕೆ ಕೊನೆಯ ದಿನಾಂಕ ಯಾವಾಗ ಯಾವ ವಿದ್ಯಾರ್ಹತೆಯನ್ನು ಪಡೆದಿರುವವರು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಹೇಗೆ ಸಲ್ಲಿಸಬೇಕು ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸಿಕೊಡುತ್ತೇವೆ.

ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಒಟ್ಟು ಐದುನೂರು ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಜೇನೆರಲಿಸ್ಟ್ ಆಫೀಸರ್ ಸ್ಕೇಲ್ 2, 3 ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಈ ಒಂದು ಹುದ್ದೆಗೆ ಆಸಕ್ತಿ ಇರುವ ಭಾರತೀಯ ನಾಗರೀಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇನ್ನು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು ನೋಡುವುದಾದರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಪ್ಪತ್ತೈದು ವರ್ಷದಿಂದ ಮೂವತ್ತೈದು ವರ್ಷದ ಒಳಗಿನ ಅಭ್ಯರ್ಥಿಗಳಾಗಿರಬೇಕು.

ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಯಾವ ವಿದ್ಯಾರ್ಹತೆಯನ್ನು ಹೊಂದಿರಬೇಕು ಎಂಬುದನ್ನು ನೋಡುವುದಾದರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪಡೆದಿರಬೇಕು ಅಥವಾ ಸಿಎ ಅಥವಾ ಸಿಎಂಎ ಅಥವಾ ಸಿ ಎಫ್ ಎ ವಿದ್ಯಾರ್ಹತೆಯನ್ನು ಪಡೆದಿರಬೇಕು. ಅನುಭವ ಇಲ್ಲದಿರುವವರು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತದಾದ್ಯಂತ ಕೆಲಸದ ಸ್ಥಳ ಇರುತ್ತದೆ. ಯಾವುದೇ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ ಇಪ್ಪತ್ತೈದು ವರ್ಷ ವಯಸ್ಸಾಗಿರಬೇಕು ಸಾಮಾನ್ಯ ಅಧಿಕಾರಿ ಎಂ ಎಂ ಜಿ ಎಸ್ ಸ್ಕೇಲ್ 2 ಹುದ್ದೆಯಲ್ಲಿ ಗರಿಷ್ಠ ಮೂವತ್ತೈದು ವರ್ಷಗಳು. ಸಾಮಾನ್ಯ ಅಧಿಕಾರಿ ಎಂ ಎಂ ಜಿ ಎಸ್ ಸ್ಕೇಲ್ 3 ಹುದ್ದೆಯಲ್ಲಿ ಗರಿಷ್ಠ ಮೂವತ್ತೆಂಟು ವರ್ಷ ನಿಗದಿಪಡಿಸಲಾಗಿದೆ.

ಈ ಒಂದು ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಹೇಗೆ ಅರ್ಜಿಯನ್ನು ಸಲ್ಲಿಸಬೇಕು ಎನ್ನುವುದರ ಕುರಿತಾಗಿ ನೋಡುವುದಾದರೆ ಮೊದಲಿಗೆ ಅಭ್ಯರ್ಥಿಗಳು ಬ್ಯಾಂಕ್ ಆಫ್ ಮಹಾರಾಷ್ಟ್ರದ ಆಫೀಸಿಯಲ್ ವೆಬ್ಸೈಟ್ ತೆರೆಯಬೇಕು. ಅಲ್ಲಿ ಅರ್ಜಿಯಲ್ಲಿ ಕೇಳಲಾದ ಮಾಹಿತಿಯನ್ನು ತುಂಬಬೇಕು ಮೊದಲಿಗೆ ನಿಮ್ಮ ಹೆಸರು ವಿಳಾಸ ಇವುಗಳನ್ನು ತುಂಬಬೇಕು ನಿಮ್ಮ ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿಯನ್ನು ಹಾಕಬೇಕು.

ಅಲ್ಲಿ ನಿಮ್ಮ ಫೋಟೋ ಮತ್ತು ಸಹಿ ಕುರಿತು ಕೇಳಲಾಗುತ್ತದೆ ನಂತರ ದಾಖಲೆಗಳನ್ನು ಕೇಳಲಾಗುತ್ತದೆ ಅವುಗಳನ್ನು ಕೂಡ ಅಪ್ಲೋಡ್ ಮಾಡಬೇಕು ಜೊತೆಗೆ ಅರ್ಜಿ ಶುಲ್ಕವನ್ನು ಕೂಡ ಪಾವತಿಸಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು ನೀವು 22 ಫೆಬ್ರವರಿ 2022 ರವರೆಗೆ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ರೀತಿಯಾಗಿ ನೀವು ಕೂಡ ಬ್ಯಾಂಕಿನಲ್ಲಿ ಕೆಲಸವನ್ನು ಮಾಡಬೇಕು ಎಂದುಕೊಂಡಿದ್ದರೆ ಬ್ಯಾಂಕ್ ಆಫ್ ಮಹಾರಾಷ್ಟ್ರದ ನೇಮಕಾತಿಗೆ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರೊಂದಿಗೆ ನಿಮ್ಮ ಪರಿಚಿತರು ಹಾಗೂ ಸ್ನೇಹಿತರಿಗೂ ಈ ಮಾಹಿತಿಯನ್ನು ತಿಳಿಸಿರಿ.

Leave A Reply

Your email address will not be published.

error: Content is protected !!
Footer code: