ಹೊಸದಾಗಿ ಬಂದಿರುವಂತಹ ಒಮಿಕ್ರೋನ್ ವೈರಸ್ ಗೆ ಸಂಬಂಧಿಸಿದಂತೆ ಸರ್ಕಾರ ಹೊಸ ಮಾರ್ಗಸೂಚಿಯನ್ನು ಹೊರತಂದಿದ್ದು ಅದರ ಪ್ರಕಾರ ವಿದ್ಯಾರ್ಥಿಗಳು ಹಾಗೂ ಪಾಲಕರು ಅನುಸರಿಸಬೇಕಾದ ಕೆಲವು ಸೂಚನೆಗಳನ್ನು ಅದರಲ್ಲಿ ತಿಳಿಸಲಾಗಿದೆ ಅದು ಏನು ಎಂಬುದರ ಬಗ್ಗೆ ತಿಳಿಸಿಕೊಡುತ್ತೇವೆ. ಜೊತೆಗೆ ಸಾಮಾನ್ಯವಾಗಿ ವಿದ್ಯಾರ್ಥಿಗಳಲ್ಲಿರುವ ಗೊಂದಲವೆಂದರೆ ಮತ್ತೆ ಶಾಲಾ-ಕಾಲೇಜುಗಳು ಬಂದ್ ಆಗುತ್ತದೆಯೇ ಎಂಬ ಪ್ರಶ್ನೆ ಎಲ್ಲರಿಗೂ ಕಾಡುತ್ತಿದೆ. ಇದರ ಜೊತೆಗೆ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳ ಮಧ್ಯವಾರ್ಷಿಕ ಪರೀಕ್ಷೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ ಅದರ ಕುರಿತು ಮಾಹಿತಿಯನ್ನು ನಾವು ನಿಮಗೆ ತಿಳಿಸಿಕೊಡುತ್ತೇವೆ.

ಈಗ ಹೊಸದಾಗಿ ಬರುತ್ತಿರುವಂತಹ ಒಮಿಕ್ರೋನ್ ಹೊಸ ವೈರಸ್ ಎಲ್ಲಾ ಕಡೆಗಳಲ್ಲಿ ಸದ್ದು ಮಾಡುತ್ತಿದೆ. ಆ ಕುರಿತಂತೆ ನಮ್ಮ ಕರ್ನಾಟಕ ಸರ್ಕಾರ ಹೊಸ ಮಾರ್ಗಸೂಚಿ ಒಂದನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಏನು ಹೇಳಲಾಗಿದೆ ಎಂಬುದನ್ನು ನೋಡುವುದಾದರೆ ಶಿಕ್ಷಣಕ್ಕೆ ಸಂಬಂಧಿಸಿದಂತೆ ಶೈಕ್ಷಣಿಕ ಸಂಸ್ಥೆಗಳಲ್ಲಿ ನಡೆಯುವ ಸಾಂಸ್ಕೃತಿಕ ಚಟುವಟಿಕೆಗಳಾಗಿರಬಹುದು ಅಥವಾ ಸಭೆಗಳಾಗಿರಬಹುದು ಅವುಗಳನ್ನು ಜನವರಿ ಹದಿನೈದರ ವರೆಗೆ ಮುಂದೂಡಲು ತಿಳಿಸಲಾಗಿದೆ. ಶಾಲಾ-ಕಾಲೇಜುಗಳಿಗೆ ತೆರಳುವ ಹದಿನೆಂಟು ವರ್ಷದ ಒಳಗಿನ ವಿಧ್ಯಾರ್ಥಿಗಳ ಪಾಲಕ-ಪೋಷಕರು ಕಡ್ಡಾಯವಾಗಿ ಎರಡು ಡೋಸ್ ಕೋವಿಡ್ ಲಸಿಕೆಯನ್ನು ಪಡೆಯತಕ್ಕದ್ದು ಎಂದು ತಿಳಿಸಲಾಗಿದೆ.

ಮತ್ತೆ ಶಾಲಾ ಕಾಲೇಜುಗಳನ್ನು ಬಂದ್ ಮಾಡುವ ಕುರಿತಾಗಿ ಯಾವುದೇ ವಿಷಯ ಮಾರ್ಗಸೂಚಿಯಲ್ಲಿ ಪ್ರಸ್ತಾಪವಾಗಿಲ್ಲ. ಯಾವ ಶಾಲಾ ಕಾಲೇಜುಗಳಲ್ಲಿ ಪಾಸಿಟಿವ್ ಕೇಸ್ ಗಳ ಸಂಖ್ಯೆ ಹೆಚ್ಚಾಗಿ ಕಂಡುಬರುತ್ತಿದೆ ಅಂತಹ ಶಾಲಾ-ಕಾಲೇಜುಗಳನ್ನು ಮಾತ್ರ ಬಂದ್ ಮಾಡಲಾಗುತ್ತಿದೆ. ಅದರ ಹೊರತಾಗಿ ರಾಜ್ಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳನ್ನು ಬಂದ್ ಮಾಡುತ್ತಿಲ್ಲ. ಆ ರೀತಿಯ ಯಾವುದೇ ನಿರ್ಧಾರಗಳನ್ನು ಸರ್ಕಾರ ಇದುವರೆಗೂ ತೆಗೆದುಕೊಂಡಿಲ್ಲ. ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆಯುವ ಪರೀಕ್ಷೆಯಲ್ಲಿ ಯಾವ ರೀತಿ ಬದಲಾವಣೆ ಉಂಟಾಗಿದೆ ಎಂಬುದರ ಬಗ್ಗೆ ನೋಡೋಣ.

ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಮಧ್ಯವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ಟೈಮ್ ಟೇಬಲ್ ಅನ್ನು ಪದೇಪದೇ ಬದಲಾಯಿಸಿ ವಿದ್ಯಾರ್ಥಿಗಳನ್ನು ತುಂಬಾ ಗೊಂದಲಕ್ಕೊಳಮಾಡಿದ್ದರು. ಈಗ ಡಿಸೆಂಬರ್ ಒಂಬತ್ತರಿಂದ ಪರೀಕ್ಷೆಯನ್ನು ನಡೆಸುವುದಕ್ಕೆ ಟೈಮ್ ಟೇಬಲ್ ಅನ್ನು ತಯಾರಿ ಮಾಡಲಾಗಿದೆ. ಸಾಮಾನ್ಯವಾಗಿ ಬೆಳಿಗ್ಗೆ ಒಂಬತ್ತರಿಂದ ಮಧ್ಯಾನ ಹನ್ನೆರಡು.

ಹದಿನೈದರವರೆಗೆ ಪರೀಕ್ಷೆಗಳು ನಡೆಯುತ್ತಿದ್ದವು. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳಿಗ್ಗೆ ಮಳೆ ಇರುವ ಕಾರಣ ಪರೀಕ್ಷೆಯನ್ನು ಒಂಬತ್ತು.ಮೂವತ್ತರಿಂದ ಹನ್ನೆರಡು.ನಲವತ್ತೈದರವರೆಗೆ ನಡೆಸುವುದಾಗಿ ತಿಳಿಸಲಾಗಿದೆ. ಆದರೆ ಮಧ್ಯಾಹ್ನದ ಸಮಯದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಇದನ್ನ ಪದವಿಪೂರ್ವ ಶಿಕ್ಷಣ ಇಲಾಖೆಯವರು ಆದೇಶದ ರೂಪದಲ್ಲಿ ಸುತ್ತೋಲೆಯನ್ನು ಹೊರಡಿಸಿದ್ದಾರೆ.

ಶಾಲಾ-ಕಾಲೇಜುಗಳಿಗೆ ಸಂಬಂಧಿಸಿದಂತೆ ಮತ್ತೆ ಬಂದ್ ಮಾಡಲಾಗುತ್ತದೆ ಎಂಬ ಸುದ್ದಿ ಹರಡಿತ್ತು. ವಿದ್ಯಾರ್ಥಿಗಳು ಕೂಡ ಗೊಂದಲಕ್ಕೆ ಒಳಗಾಗಿದ್ದರು ಆದರೆ ಆ ರೀತಿಯ ಯಾವುದೇ ನಿರ್ಣಯಗಳನ್ನು ಸರ್ಕಾರ ಇದುವರೆಗೂ ತೆಗೆದುಕೊಂಡಿಲ್ಲ. ಕರೋನಾ ಹೆಚ್ಚಾಗುತ್ತಿರುವ ಕಾರಣ ನಾವೆಲ್ಲರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಅವುಗಳು ಹರಡದಂತೆ ಮುನ್ನೆಚ್ಚರಿಕೆಯನ್ನು ವಹಿಸೋಣ. ಪದವಿಪೂರ್ವ ವಿದ್ಯಾರ್ಥಿಗಳು ಪರೀಕ್ಷೆ ಹತ್ತಿರ ಬಂದಿರುವುದರಿಂದ ಪರೀಕ್ಷೆ ಕಡೆ ಗಮನಹರಿಸಿ ಯಾವುದೇ ಆತಂಕಕ್ಕೆ ಒಳಗಾಗದೆ ಚೆನ್ನಾಗಿ ಓದಿಕೊಂಡು ಪರೀಕ್ಷೆಯನ್ನು ಬರೆಯಿರಿ.

By admin

Leave a Reply

Your email address will not be published. Required fields are marked *

error: Content is protected !!
Footer code: