ರಿಯಲ್ ಸ್ಟಾರ್ ಉಪೇಂದ್ರ ಅವರ ಮುದ್ದು ಮಗಳ ಬಡೇ ಸಂಭ್ರಮ ಹೇಗಿತ್ತು ನೋಡಿ

0

ಕನ್ನಡ ಚಿತ್ರರಂಗದ ಹೊಸ ರೂಪದ ನಿರ್ದೇಶನ ಹಾಗು ನಟನೆಯ ನಾಯಕ ನಿರ್ದೇಶಕರು ಎಂದರೆ ಅದು ರಿಯಲ್ ಸ್ಟಾರ್ ಉಪೇಂದ್ರ ಅವರು. ಉಪೇಂದ್ರ ಅವರು ಸದಾ ಹೊಸ ಚಿಂತನೆಯ ನಟರು. ಅದಕ್ಕಾಗಿಯೇ ಅವರನ್ನು ರಿಯಲ್ ಸ್ಟಾರ್ ಎಂದು ಕರೆಯುತ್ತಾರೆ. ಉಪೇಂದ್ರ ಅವರು ಮಧ್ಯಮ ವರ್ಗದ ಬ್ರಾಹ್ಮಣ ಕುಟುಂಬದಲ್ಲಿ ಕುಂದಾಪುರದ ಸಮೀಪದಲ್ಲಿರುವ ಕೋಟೇಶ್ವರದಲ್ಲಿ ಜನಿಸಿದರು. ಇವರು ತಮ್ಮ ಮತ್ತು ಇತರರ ಚಿತ್ರಗಳಿಗೆ ಹಾಡುಗಳನ್ನು ರಚಿಸಿದ್ದಾರೆ. ಆದ್ದರಿಂದ ನಾವು ಇಲ್ಲಿ ಅವರ ಮಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

1992ರಲ್ಲಿ ತೆರೆಗೆ ಬಂದ ತರ್ಲೆನನ್ಮಗ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾದ ಉಪೇಂದ್ರ ಮುಂದೆ 1993ರಲ್ಲಿ ಶ್ ಎಂಬ ಹಾರರ್ ಚಿತ್ರ ನಿರ್ದೇಶಿಸಿದರು. 1995ರಲ್ಲಿ ಬಿಡುಗಡೆಯಾದ ಶಿವರಾಜಕುಮಾರ್ ಅಭಿನಯದ ಓಂ ಚಿತ್ರ ಇಡೀ ಭಾರತ ಚಿತ್ರರಂಗದಲ್ಲಿಯೇ ಹೊಸ ಸಂಚಲನ ಸೃಷ್ಟಿಸಿತು. ಈ ಚಿತ್ರದಲ್ಲಿ ನಿಜವಾದ ರೌಡಿಗಳು ತಮ್ಮ ಪಾತ್ರಗಳಲ್ಲಿ ಸ್ವತಃ ತಾವೇ ಅಭಿನಯಿಸಿರುವುದು ವಿಶೇಷ. ನಂತರ ಆಪರೇಷನ್ ಅಂತ, ಸ್ವಸ್ತಿಕ್ ಚಿತ್ರಗಳನ್ನು ನಿರ್ದೇಶಿಸಿದರು. 1998ರಲ್ಲಿ ತೆರೆಗೆ ಬಂದ ಎ ಚಿತ್ರವನ್ನು ನಿರ್ದೇಶಿಸಿ ಸ್ವತಃ ತಾವೇ ನಟಿಸಿ ನಾಯಕನಾಗಿಯೂ ಕನ್ನಡ ಚಿತ್ರರಂಗದಲ್ಲಿ ಪರಿಚಿತರಾದರು.

ಮುಂದೆ ತೆರೆಗೆ ಬಂದ ಉಪೇಂದ್ರ ಚಿತ್ರವು ಹಲವಾರು ದಾಖಲೆಗಳನ್ನು ಬರೆಯಿತು. ಇವೆರಡು ಚಿತ್ರಗಳು ಕನ್ನಡದಲ್ಲಿ ಮಾತ್ರವಲ್ಲದೇ ತೆಲುಗು ಚಿತ್ರರಂಗದಲ್ಲಿಯೂ ಶತದಿನ ಪೂರೈಸಿದವು. ಇಲ್ಲಿಂದ ಮುಂದೆ 10 ವರ್ಷಗಳ ಕಾಲ ನಿರ್ದೇಶನವನ್ನು ಬದಿಗಿಟ್ಟ ಉಪ್ಪಿ ಹಲವಾರು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದರು. ಮುಂದೆ ಇವರು 2010ರಲ್ಲಿ ನಿರ್ದೇಶಿಸಿದ ಸೂಪರ್ ಮತ್ತು 2015ರಲ್ಲಿ ನಿರ್ದೇಶಿಸಿದ ಉಪ್ಪಿ 2 ಚಿತ್ರಗಳು ಶತದಿನ ಪೂರೈಸಿದವು.

2003ರಲ್ಲಿ ಉಪೇಂದ್ರ ಖ್ಯಾತ ನಟಿ ಪ್ರಿಯಾಂಕ ಅವರನ್ನು ಕೈಹಿಡಿದರು. ಇವರಿಗೆ ಆಯುಷ್ ಉಪೇಂದ್ರ ಮತ್ತು ಐಶ್ವರ್ಯಾ ಉಪೇಂದ್ರ ಎಂಬ ಇಬ್ಬರು ಮಕ್ಕಳಿದ್ದಾರೆ. ಐಶ್ವರ್ಯಾ ಉಪೇಂದ್ರ ಅವರು ದೇವಕಿ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಪಾದಾರ್ಪಣೆ ಮಾಡಿದ್ದರು. ಮೊದಲ ಚಿತ್ರದಲ್ಲೇ ಅತ್ಯುತ್ತಮ ಅಭಿನಯ ನೀಡಿದ್ದ ಉಪ್ಪಿ ಮಗಳ ಅಭಿನಯಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗಿದ್ದವು. ಕೊರೋನಾ ಭೀತಿ ಹಾಗೂ ಲಾಕ್​ಡೌನ್  ಉಪ್ಪಿಯ ಮಗಳ ಹೊಸ ವಸಂತಕ್ಕೆ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!