ಮೊದಲಿನಿಂದಲೂ ನಿರುದ್ಯೋಗ ಸಮಸ್ಯೆಯನ್ನು ನಾವು ಎದುರಿಸುತ್ತಿದ್ದೇವೆ. ಇತ್ತೀಚೆಗೆ ಕೊರೋನ ಮಹಾಮಾರಿ ಅಟ್ಟಹಾಸದಿಂದ ಬಹಳಷ್ಟು ಜನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ, ಹೊಸದಾಗಿ ಉದ್ಯೋಗ ಸೃಷ್ಟಿ ಆಗದೆ ಬದುಕು ಬೀದಿಗೆ ಬಿದ್ದಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ.
ಮಾಣಿಕ್ ಬಾಗ್ ಆಟೋಮೊಬೈಲ್ ಪ್ರೈವೇಟ್ ಲಿಮಿಟೆಡ್ ನಲ್ಲಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಷ್ಠಿತ ಆಟೋಮೊಬೈಲ್ ಡೀಲರ್ ಮಾಣಿಕ್ ಬಾಗ್ ಆಟೋಮೊಬೈಲ್ ಪ್ರೈವೇಟ್ ಲಿಮಿಟೆಡ್ ಇಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಮಾಣಿಕ್ ಬಾಗ್ ಆಟೋಮೊಬೈಲ್ ಪ್ರೈವೇಟ್ ಲಿಮಿಟೆಡ್ ಇದು ವಿವಿಧ ಜಿಲ್ಲೆಗಳಲ್ಲಿ ತನ್ನ ಮಳಿಗೆಗಳನ್ನು ಹೊಂದಿದೆ. ಫೀಲ್ಡ್ ಸೇಲ್ಸ್ ಎಕ್ಸಿಕ್ಯೂಟಿವ್, ಗ್ರಾಹಕ ಸಂಬಂಧ ಕಾರ್ಯನಿರ್ವಾಹಕರು, ಆಕ್ಸೆಸರೀಸ್ ಎಕ್ಸಿಕ್ಯೂಟಿವ್ ಇನ್ನಿತರ ಖಾಲಿ ಹುದ್ದೆಗಳನ್ನು ಭರ್ತಿಮಾಡಲು ಅರ್ಜಿ ಆಹ್ವಾನಿಸಿದೆ. ಧಾರವಾಡ, ಹುಬ್ಬಳ್ಳಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನೇಮಕಾತಿ ನಡೆಯುತ್ತಿದೆ ಅನುಭವ ಇಲ್ಲದೆ ಇರುವವರು ಕೂಡ ಅರ್ಜಿ ಸಲ್ಲಿಸಬಹುದಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ಸಂಬಳವಿರುತ್ತದೆ. ಅರ್ಜಿ ಸಲ್ಲಿಸಲು ಯಾವುದೆ ಅರ್ಜಿ ಶುಲ್ಕ ಇರುವುದಿಲ್ಲ. ಮಾಣಿಕ್ ಬಾಗ್ ಆಟೋಮೊಬೈಲ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿಯನ್ನು ಓದಿರಬೇಕು ಮತ್ತು ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಎಚ್ಆರ್ ಡಾಟ್ ಮಾಣಿಕ್ ಬಾಗ್ ಡಾಟ್ ಕಾಂ ಇಮೇಲ್ ವಿಳಾಸಕ್ಕೆ ತಮ್ಮ ರೆಸ್ಯೂಮ್ ಕಳುಹಿಸಬಹುದು. ಫೀಲ್ಡ್ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಹತ್ತಿರ ಡಿಎಲ್ ಮತ್ತು ಟು ವೀಲರ್ ಇರಬೇಕಾಗುತ್ತದೆ. ಇಂಡಸ್ಟ್ರಿಯಲ್ಲಿ ಒಂದರಿಂದ ಎರಡು ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದರೆ ಉತ್ತಮ. ಕಸ್ಟಮರ್ ರಿಲೇಷನ್ ಎಕ್ಸಿಕ್ಯೂಟಿವ್ ಈ ಹುದ್ದೆಗೆ ಮಹಿಳೆಯರು ಅರ್ಜಿ ಸಲ್ಲಿಸಬೇಕಾಗುತ್ತದೆ. ಪದವಿ ಓದಿರಬೇಕು ಹಾಗೂ ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು.
ಆಕ್ಸೆಸರೀಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಮಹಿಳೆಯರು ಅರ್ಜಿ ಸಲ್ಲಿಸಬೇಕಾಗುತ್ತದೆ. ಹುಬ್ಬಳ್ಳಿಯಲ್ಲಿ ಕೆಲಸ ಮಾಡಬೇಕಾಗಿರುತ್ತದೆ. ಪದವಿ ಓದಿರಬೇಕು ಹಾಗೂ ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು. ಮಹಿಳೆಯರು ಕೂಡ ಮಾಣಿಕ್ ಬಾಗ್ ಆಟೋಮೊಬೈಲ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಗುಮಾಸ್ತ, ಶಿಕ್ಷಕ, ನರ್ಸ್, ಅಕೌಂಟೆಂಟ್, ಉಪನ್ಯಾಸಕ, ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಇದೆ ಬರುವ 26ನೇ ತಾರೀಖಿನಂದು ರವಿವಾರ ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯುತ್ತದೆ. ಕರ್ನಾಟಕ ಶಾಲಾ ನೇಮಕಾತಿ, ರಾಷ್ಟ್ರೀಯ ಶಿಕ್ಷಣ ಸಮಿತಿ ಗುದ್ಲೆಪ್ಪ ವೀರಪ್ಪ ಹಳ್ಳಿಕೇರಿ, ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜು, ಹೊಸರಿತ್ತಿ ಹಾವೇರಿ. ಅಕೌಂಟೆಂಟ್, ಕ್ಲರ್ಕ್, ಡಿ-ದರ್ಜೆ ಹುದ್ದೆಗಳು ಇನ್ನಿತರ ವಿವಿಧ ಖಾಲಿ ಹುದ್ದೆಗಳನ್ನು ಭರ್ತಿಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಪಿಯುಸಿ, ಯಾವುದೆ ಪದವಿ, ಎಮ್ ಎ ಓದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ಸಂಬಳ ಕೊಡಲಾಗುತ್ತದೆ. ಅರ್ಜಿ ಸಲ್ಲಿಸುವಾಗ ಯಾವುದೆ ಅರ್ಜಿ ಶುಲ್ಕ ಕೊಡುವ ಅವಶ್ಯಕತೆ ಇರುವುದಿಲ್ಲ. ಹಾವೇರಿಯಲ್ಲಿ ಕಾಲೇಜಿನಲ್ಲಿಯೆ ಸಂದರ್ಶನ ನಡೆಯುತ್ತದೆ. ಬೇರೆ ಬೇರೆ ಜಿಲ್ಲೆಗಳಿಂದ ಸಂದರ್ಶನಕ್ಕೆ ಹೋಗಲು ಆಗದೆ ಇರುವವರು ಕಾಲೇಜಿನ ವಿಳಾಸಕ್ಕೆ ಡಾಕ್ಯೂಮೆಂಟ್ಸ್ ಗಳನ್ನು ಕಳುಹಿಸಬಹುದು. ಈ ಮಾಹಿತಿಯನ್ನು ತಪ್ಪದೆ ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ತಿಳಿಸಿ.
ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430