ಸ್ವಂತ ಮನೆ ಇಲ್ಲದವರಿಗೆ ಇಲ್ಲಿದೆ ಸಿಹಿ ಸುದ್ದಿ ನೋಡಿ..

0

ಸರ್ಕಾರದಿಂದ ಎಲ್ಲಾ ವಿಧದ ಸಮಸ್ಯೆಗಳನ್ನು ಎದುರಿಸುತ್ತಿರುವ ಜನರಿಗೆ ಅನೇಕ ಯೋಜನೆಗಳು, ಕಾರ್ಯಕ್ರಮಗಳನ್ನು ಜಾರಿಗೆ ತರುತ್ತದೆ. ಅದರಂತೆ ಮನೆ ಇಲ್ಲದವರಿಗೆ, ಗ್ರಾಮೀಣ ಪ್ರದೇಶದ ಜನರಿಗೆ ಬಸವ ವಸತಿ ಯೋಜನೆಯ ಮೂಲಕ ಮನೆ ಕಟ್ಟಲು ಧನ ಸಹಾಯ ಮಾಡುತ್ತದೆ. ಬಸವ ವಸತಿ ಯೋಜನೆಯ ಬಗ್ಗೆ ಕೆಲವು ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ.

ಕರ್ನಾಟಕ ರಾಜ್ಯ ಸರ್ಕಾರ ಮನೆ ಇಲ್ಲದ ಗ್ರಾಮೀಣ ಜನರಿಗೆ ಸಿಹಿ ಸುದ್ದಿಯೊಂದು ನೀಡಿದೆ. ಗ್ರಾಮೀಣ ಪ್ರದೇಶದ ವಸತಿ ರಹಿತ ಜನರಿಗೆ ಬಸವ ವಸತಿ ಕಲ್ಯಾಣ ಯೋಜನೆಯಡಿ ಒಟ್ಟು 4 ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗುತ್ತದೆ. ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವರಾದ ಪಿ ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ. ಈ ವರ್ಷ ಬಸವ ವಸತಿ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 4 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ. ಪ್ರತಿಯೊಂದು ಗ್ರಾಮ ಪಂಚಾಯತಿಗೆ ಕನಿಷ್ಟ 40-50 ಮನೆಗಳನ್ನು ಮಂಜೂರು ಮಾಡಲಾಗುವುದು.

ಈ ಯೋಜನೆಯಡಿ ಜಾತಿ ಭೇದವಿಲ್ಲದೆ, ಸೂರು ಇಲ್ಲದವರಿಗೆ ಅವಶ್ಯಕತೆ ಇರುವ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದು ಹೇಳಿದ್ದಾರೆ. ಈಗಾಗಲೆ ಬೇರೆ ಬೇರೆ ಯೋಜನೆಗಳಿಗೆ ಆಯ್ಕೆಯಾದ ಫಲಾನುಭವಿಗಳಿಗೆ ಅಥವಾ ಅವಶ್ಯಕತೆ ಇಲ್ಲದವರಿಗೆ ಈ ಯೋಜನೆಯಡಿಯಲ್ಲಿ ಆಯ್ಕೆ ಮಾಡಬಾರದು ಎಂದು ತಿಳಿಸಿದ್ದಾರೆ. ಪಾರದರ್ಶಕತೆಗೆ ಯಾವುದೆ ಅಪ ಪ್ರಚಾರವಾಗದ ರೀತಿಯಲ್ಲಿ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಯೋಜನೆಯ ಆಯ್ಕೆ ಪ್ರಕ್ರಿಯೆ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಲಾಗಿದೆ. ಈ ವಿಷಯದ ಕುರಿತು ಆಯಾ ಕ್ಷೇತ್ರಗಳ ಶಾಸಕರೊಂದಿಗೆ ಚರ್ಚಿಸಿ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ಸಚಿವರಾದ ಪಿ. ಸೋಮಣ್ಣ ಅವರು ತಿಳಿಸಿದ್ದಾರೆ. ಅಭ್ಯರ್ಥಿಗಳು ಬಸವ ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಬೇಕಾಗುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ಮನೆ ಇಲ್ಲದವರು ತಮ್ಮ ಗ್ರಾಮ ಪಂಚಾಯತಿಗೆ ಸಂಪರ್ಕಿಸುವ ಮೂಲಕ ಬಸವ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಗ್ರಾಮೀಣ ಪ್ರದೇಶದ ಮನೆ ಇಲ್ಲದವರು ಅಗತ್ಯ ದಾಖಲಾತಿಗಳೊಂದಿಗೆ ಹತ್ತಿರದ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬೇಕು. ಆಯ್ಕೆ ಪಟ್ಟಿಯಲ್ಲಿ ಹೆಸರು ಬಂದಿರುವವರು ಮನೆ ನಿರ್ಮಿಸಿಕೊಳ್ಳಲು ಬೇಕಾದ ಹಣವನ್ನು ಸರ್ಕಾರವೆ ಈ ಯೋಜನೆಯ ಮೂಲಕ ಕೊಡುತ್ತದೆ. ಈ ಮಾಹಿತಿ ಉಪಯುಕ್ತವಾಗಿದ್ದು ಗ್ರಾಮೀಣ ಪ್ರದೇಶದವರಿಗೆ ಅದರಲ್ಲೂ ಮನೆ ಇಲ್ಲದವರಿಗೆ ತಪ್ಪದೆ ತಿಳಿಸಿ, ಸರ್ಕಾರದ ಪ್ರಮುಖ ಯೋಜನೆಯಾದ ಬಸವ ವಸತಿ ಯೋಜನೆಯ ಲಾಭ ಪಡೆಯಿರಿ. ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.

error: Content is protected !!
Footer code: