ಅಗ್ನಿಶಾಮಕ ಇಲಾಖೆಯಲ್ಲಿನ ನೇಮಕಾತಿ ಕುರಿತು ಇಲ್ಲಿದೆ ಮಾಹಿತಿ

0

ಈಗಾಗಲೇ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿ ಅವರಿಗೆ ಪರೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ಅಗ್ನಿಶಾಮಕ ಇಲಾಖೆಯ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿಯೊಂದನ್ನು ಹೊರಡಿಸಲಾಗಿದೆ. ಇಲಾಖೆಯು ಅಗ್ನಿಶಾಮಕ ಇಲಾಖೆಯ ಖಾಲಿ ಇರುವ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತಯಾರಿಸಿದೆ. ಆ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವಿಂದು ತಿಳಿದುಕೊಳ್ಳೋಣ.

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ನಿಯಮಗಳು ಎರಡು ಸಾವಿರದ ಹದಿಮೂರರನ್ವಯ ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಶೇಕಡ ಒಂದು ಅನುಪಾತ ಐದರಂತೆ ಆಯ್ಕೆ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅರ್ಹ ಅಭ್ಯರ್ಥಿಗಳಿಗೆ ದೇಹದಾರ್ಡ್ಯತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ಗಳನ್ನು ನಡೆಸಿ ಪೂರ್ಣಗೊಳಿಸಲಾಗುತ್ತದೆ.

ವೃಂದ ಮತ್ತು ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳು ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ದೇಹದಾರ್ಡ್ಯತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳನ್ನು ಕ್ರೋಡೀಕರಿಸಿ ಮೆರಿಟ್ ಮತ್ತು ಮೀಸಲಾತಿ ಅನುಸಾರ ಅರ್ಹ ಅಭ್ಯರ್ಥಿಗಳ ಅಗ್ನಿಶಾಮಕ, ಉಳಿದ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಶರತ್ತುಗಳನ್ವಯ ಪ್ರಕಟಿಸಲಾಗಿದೆ. ಅಭ್ಯರ್ಥಿಗಳ ಅರ್ಜಿ ಸಂಖ್ಯೆ ಅಭ್ಯರ್ಥಿಗಳ ಹೆಸರು ಹುಟ್ಟಿದ ದಿನಾಂಕ ಎಸೆಸೆಲ್ಸಿಯಲ್ಲಿ ತೆಗೆದುಕೊಂಡಿರುವಂತಹ ಅಂಕಗಳು ದೈಹಿಕ ಪರೀಕ್ಷೆಯ ಅಂಕಗಳು ಒಟ್ಟು ಅಂಕಗಳು ಕೆಟಗೇರಿ ಇವುಗಳನ್ನು ಆಯ್ಕೆ ಪಟ್ಟಿಯಲ್ಲಿ ತಿಳಿಸಲಾಗಿದೆ.

ನೀವು ಕೂಡ ಅಗ್ನಿಶಾಮಕ ಇಲಾಖೆಯಲ್ಲಿ ನಡೆಯುವ ಈ ಒಂದು ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಿದ್ದರೆ ಈ ಕೂಡಲೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪರಿಶೀಲಿಸಿ ಅಲ್ಲಿ ನಿಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಿ. ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರ ಜೊತೆಗೆ ನಿಮ್ಮ ಜೊತೆಗೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿರುವ ನಿಮ್ಮ ಸ್ನೇಹಿತರಿಗೂ ಈ ಮಾಹಿತಿಯನ್ನು ತಿಳಿಸಿರಿ.

Leave A Reply

Your email address will not be published.

error: Content is protected !!