ಉದ್ಯೋಗವನ್ನು ಹುಡುಕುತ್ತಿರುವವರಿಗಾಗಿ ನಾವಿಂದು ಎರಡು ಸಾವಿರದ ಇಪ್ಪತ್ತೆರಡನೇ ಇಸ್ವಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಮತ್ಸ್ಯ ಸಂಪದ ಯೋಜನೆಯ ಅಡಿಯಲ್ಲಿ ನಡೆಯುತ್ತಿರುವ ಹುದ್ದೆಗಳ ನೇಮಕಾತಿಯ ಕುರಿತಾಗಿ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ಯಾರೆಲ್ಲಾ ಈ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಈ ಕುರಿತಾದ ಸಂಪೂರ್ಣ ಮಾಹಿತಿಗಳನ್ನು ತಿಳಿಸಿಕೊಡುತ್ತೇವೆ. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಎರಡು ಸಾವಿರದ ಇಪ್ಪತ್ತೆರಡರ ಸಾಗರ ಮಿತ್ರ ನೇಮಕಾತಿ ನಡೆಯುತ್ತಿದ್ದು ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಸಾಗರ ಮಿತ್ರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ ಸಾಗರ ಮಿತ್ರ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಗುತ್ತಿಗೆ ಆಧಾರದ ಮೇಲೆ ಒಂಬತ್ತು ತಿಂಗಳ ಅವಧಿಗೆ ನೇಮಕಾತಿ ನಡೆಯುತ್ತಿದ್ದು ಮೀನುಗಾರಿಕೆ ವಿಜ್ಞಾನದಲ್ಲಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ. ಈ ಒಂದು ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕು.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹದಿನೆಂಟು ವರ್ಷ ಮೇಲ್ಪಟ್ಟವರು ಹಾಗೂ ಮೂವತ್ತೈದು ವರ್ಷದ ಒಳಗಿನ ಅಭ್ಯರ್ಥಿಗಳಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಹುದ್ದೆಗಳ ನೇಮಕಾತಿ ನಡೆಯುವ ಸ್ಥಳಗಳು ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಗರ ಮಿತ್ರ ನೇಮಕಾತಿ ನಡೆಯುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಫೆಬ್ರವರಿ ಒಂಬತ್ತು ಎರಡು ಸಾವಿರದ ಇಪ್ಪತ್ತೆರಡರ ಒಳಗಾಗಿ ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ನಂತರ ನೇರ ಸಂದರ್ಶನ ಕರೆಯುತ್ತಾರೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವುದಕ್ಕೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಈ ಒಂದು ಹುದ್ದೆಗೆ ಮೀನುಗಾರಿಕೆ ವಿಜ್ಞಾನದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈಗಾಗಲೇ ಈ ಹುದ್ದೆಯಲ್ಲಿ ಅನುಭವವಿರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು ಜೊತೆಗೆ ಅನುಭವ ಇಲ್ಲದಿರುವ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು. ಇನ್ನು ಯಾವ ಯಾವ ಜಿಲ್ಲೆಗಳಲ್ಲಿ ಯಾವ ದಿನಾಂಕದಂದು ನೇರ ಸಂದರ್ಶನ ಯಾವ ಸ್ಥಳದಲ್ಲಿ ಇರುತ್ತದೆ ಎನ್ನುವುದನ್ನು ತಿಳಿದುಕೊಳ್ಳೋಣ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಬ್ರುವರಿ ಹದಿನೆಂಟು ಎರಡು ಸಾವಿರದ ಇಪ್ಪತ್ತೆರಡರಂದು ಬೆಳಿಗ್ಗೆ ಹತ್ತು ಗಂಟೆಗೆ ಡೀನ್ ಕಾಲೇಜ್ ಆಫ್ ಫಿಶರೀಸ್ ಮಂಗಳೂರು ಇಲ್ಲಿ ನೇರ ಸಂದರ್ಶನ ನಡೆಯುತ್ತದೆ.
ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಫೆಬ್ರುವರಿ ಇಪ್ಪತ್ತೊಂದು ಎರಡು ಸಾವಿರದ ಇಪ್ಪತ್ತೆರಡರಂದು ಬೆಳಿಗ್ಗೆ ಹತ್ತು ಗಂಟೆಗೆ ಜಾಯಿಂಟ್ ಡೈರೆಕ್ಟರ್ ಆಫ್ ಫಿಶರೀಸ್, ಫಿಶರಿಸ್ ಡಿಪಾರ್ಟ್ಮೆಂಟ್ ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹದಿನೈದು ಮಾಸಿಕ ವೇತನ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ಫೆಬ್ರುವರಿ ಒಂಬತ್ತರ ಒಳಗಾಗಿ [email protected] ಈ ವಿಳಾಸಕ್ಕೆ ತಮ್ಮ ರೆಸುಮ್ ಕಳಿಸಬೇಕು. ನೀವು ಕೂಡ ಮೀನುಗಾರಿಕೆ ವಿಜ್ಞಾನದಲ್ಲಿ ಪದವಿ ಪಡೆದವರಾಗಿದ್ದರೆ ಈ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಮಾಹಿತಿಯನ್ನು ನೀವು ತೆಗೆದುಕೊಳ್ಳುವುದರೊಂದಿಗೆ ನಿಮ್ಮ ಪರಿಚಿತರಿಗೂ ಹಾಗು ಸ್ನೇಹಿತರಿಗೂ ತಲುಪಿಸಿ.