ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅರ್ಜಿ ಹಾಕಿ

0

ಕರ್ನಾಟಕದ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಗ್ರಾಮ ಪಂಚಾಯಿತಿಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು ಮತ್ತು ಹುದ್ದೆಯ ಸಂಖ್ಯೆಗಳು ಇಂತಿವೆ.
ಡಾಟಾ ಎಂಟ್ರಿ ಆಪರೇಟರ್ 12,
ಕರವಸೂಲಿಗಾರ ಮತ್ತು ಕ್ಲರ್ಕ್ ಕಮ್ ಡಾಟಾ ಎಂಟ್ರಿ ಆಪರೇಟರ್04,
ಅಟೆಂಡೆಂಟ್30
ಹುದ್ದೆಯ ಸಂಖ್ಯೆ:

ಒಟ್ಟು 46 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಯೋಮಿತಿ: ಸಾಮಾನ್ಯ ವರ್ಗ – ಗರಿಷ್ಠ 35 ವರ್ಷ
ಒಬಿಸಿ ವರ್ಗ – ಗರಿಷ್ಠ 38 ವರ್ಷ
SC/ST/ ಪ್ರವರ್ಗ 1 – ಗರಿಷ್ಠ 40 ವರ್ಷ
ಉದ್ಯೋಗ ಸ್ಥಳ: ಅಭ್ಯರ್ಥಿಯು ಕರ್ನಾಟಕದ ಕೋಲಾರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸಬೇಕು.

ವೇತನ: ವೇತನ ಮತ್ತು ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಅಧಿಸೂಚನೆಯನ್ನು ಓದಿರಿ. ವಿದ್ಯಾರ್ಹತೆ: ಕರವಸೂಲಿಗಾರ – ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಮತ್ತು ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.

ಡಾಟಾ ಎಂಟ್ರಿ ಆಪರೇಟರ್ – ಅಭ್ಯರ್ಥಿಯು ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.ಅಟೆಂಡೆಂಟ್ – ಅಭ್ಯರ್ಥಿಯು ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

ಆಯ್ಕೆ ವಿಧಾನ: ಕರವಸೂಲಿಗಾರ & ಅಟೆಂಡೆಂಟ್ – ಅಭ್ಯರ್ಥಿಯು ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಡಾಟಾ ಎಂಟ್ರಿ ಆಪರೇಟರ್ – ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ-ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಖುದ್ದಾಗಿ ಹಾಜರಾಗಿ ಕಛೇರಿಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇಲ್ಲ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/09/2022
Karnataka Gram Panchayat Various Jobs 2022 Application Form Link – https://bit.ly/3QgMBBL

Leave A Reply

Your email address will not be published.

error: Content is protected !!