ಇತ್ತೀಚಿಗೆ ಅತಿಯಾಗಿರುವ ಅಕಾಲಿಕ ಮಳೆಯಿಂದಾಗಿ ಜನರು ಗೊಂದಲಕ್ಕೆ ಒಳಗಾಗಿದ್ದಾರೆ. ಯಾವಾಗ ಮಳೆ ಬರುತ್ತದೆ ಯಾವಾಗ ಕಡಿಮೆಯಾಗುತ್ತದೆ ಎಂಬ ಗೊಂದಲದಲ್ಲಿ ಜನರಿದ್ದಾರೆ. ಈ ಅಕಾಲಿಕ ಮಳೆಯಿಂದಾಗಿ ಜನರಿಗೆ ತೊಂದರೆ ಉಂಟಾಗುತ್ತಿದ್ದು ಜನರ ಜೀವದ ಜೊತೆಗೆ ಆಸ್ತಿಪಾಸ್ತಿಗಳು ಹಾನಿಗೊಳಗಾಗುತ್ತಿವೆ. ಅದರಲ್ಲಿಯೂ ರೈತರಿಗೆ ಬೆಳೆದಂತಹ ಬೆಳೆಗಳು ಕೈಗೆ ಸಿಗದೇ ಕಣ್ಣೆದುರಲ್ಲೇ ಮಳೆಯಲ್ಲಿ ಕೊಚ್ಚಿ ಹೋಗುತ್ತಿವೆ.
ನಾವಿಂದು ನಿಮಗೆ ದೇಶದಲ್ಲಿ ಎಲ್ಲೆಲ್ಲಿ ಮಳೆಯಾಗಲಿದೆ ಹವಾಮಾನ ವರದಿ ಪ್ರಕಾರ ಎಲ್ಲೆಲ್ಲಿ ಮಳೆ ಹೆಚ್ಚಾಗಲಿದೆ ನಮ್ಮ ರಾಜ್ಯದಲ್ಲಿ ಮಳೆ ಹೇಗಿರಲಿದೆ ಎಂಬುದರ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಬುಧವಾರದವರೆಗೂ ಮಳೆ ಜೋರಾಗಿ ಇರಲಿದೆ.
ಬೆಂಗಳೂರು ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನ ಮತ್ತು ಕರಾವಳಿ ಭಾಗದ ಹಲವು ಪ್ರದೇಶಗಳಲ್ಲಿ ಲಘು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ. ತಮಿಳುನಾಡಿನಲ್ಲಿ ನವೆಂಬರ್ ಮೂವತ್ತರವರೆಗೂ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಆಂಧ್ರಪ್ರದೇಶದಲ್ಲಿ ಮಳೆ ವಿಪರೀತವಾಗಿ ಹೆಚ್ಚಾಗುತ್ತಿದ್ದು ಸಾವಿನ ಸಂಖ್ಯೆ ಕೂಡ ಅಧಿಕವಾಗುತ್ತಿದೆ.
ಮಲೆನಾಡು ಕರಾವಳಿ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಅಬ್ಬರಿಸಲಿದೆ. ಕೊಡಗು ಚಿಕ್ಕಮಗಳೂರು ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಮೈಸೂರು ಮಂಡ್ಯ ಜಿಲ್ಲೆಗಳಲ್ಲಿ ಮಳೆ ಯಾಗಲಿದ್ದು ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಇಂದು ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಕೇರಳದಲ್ಲಿ ಸಾಕಷ್ಟು ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಐ ಎಂ ಡಿ ಅಂಕಿ-ಅಂಶಗಳ ಪ್ರಕಾರ ಕರ್ನಾಟಕವು ತಿಂಗಳಿಗೆ ಎರಡುನೂರಾ ತೊಂಬತ್ತೆರಡರಷ್ಟು ಹೆಚ್ಚುವರಿ ಮಳೆಯನ್ನು ಪಡೆದಿದೆ. ಈ ವಿಪರೀತ ಮಳೆಯು ಬಾರಿ ಪ್ರವಾಹವನ್ನು ಉಂಟುಮಾಡುತ್ತಿದೆ ಇದು ಜೀವಹಾನಿ ಆಸ್ತಿ ಹಾನಿಗೆ ಕಾರಣವಾಗುತ್ತಿದೆ ಎನ್ನಲಾಗಿದೆ.
ಈಶಾನ್ಯ ಮಾನ್ಸೂನ್ ನಿಂದ ದಕ್ಷಿಣ ಕರ್ನಾಟಕ ಕೇರಳ ತಮಿಳುನಾಡು ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣದ ಕೆಲವು ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ. ಇಂದು ತಮಿಳುನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಬಂಗಾಳಕೊಲ್ಲಿಯಲ್ಲಿ ಅಭಿವೃದ್ಧಿಯಾದರೆ ಮುಂದಿನ ವಾರಂತ್ಯದ ವೇಳೆಗೆ ಪೂರ್ವ ಕರಾವಳಿ ರಾಜ್ಯಗಳಾದ ಒಡಿಶಾ ಮತ್ತು ಆಂಧ್ರ ಪ್ರದೇಶಕ್ಕೆ ಅಪಾಯ ಎದುರಾಗಬಹುದು.
ಲಡಾಕ್ ಮತ್ತು ಅರುಣಾಚಲ ಪ್ರದೇಶದಲ್ಲಿ ಈ ವಾರ ಪ್ರತೇಕ ಮಳೆ ಅಥವಾ ಹಿಮವನ್ನು ಕಾಣಬಹುದು. ದೇಶದ ಇತರೆಡೆ ಯಾವುದೇ ಮಹತ್ವದ ಮಳೆಯ ಮುನ್ಸೂಚನೆ ಇಲ್ಲ ದೇಶದಾದ್ಯಂತ ರಾತ್ರಿಯ ಕನಿಷ್ಠವು ಸಾಮಾನ್ಯಕ್ಕಿಂತ ಸರಾಸರಿ ಅಥವಾ ಹೆಚ್ಚಾಗುತ್ತದೆ. ಈ ರೀತಿಯ ಹವಾಮಾನ ವರದಿಯನ್ನು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.