ಸರ್ಕಾರ ಎಲ್ಲಾ ಮಕ್ಕಳು ಶಿಕ್ಷಣವನ್ನು ಪಡೆಯಬೇಕು ಎಂಬ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತದೆ ಅಂತಹ ಯೋಜನೆಗಳಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. ಅದರ ಪ್ರಕಾರವಾಗಿ ಎರಡು ಸಾವಿರದ ಇಪ್ಪತ್ತೊಂದು ಇಪ್ಪತ್ತೆರಡನೇ ಸಾಲಿನ ಒಂದನೇ ತರಗತಿಯಿಂದ ಹತ್ತನೇ ತರಗತಿಯಲ್ಲಿ ಓದುತ್ತಿರುವಂತಹ ಬಾಲಕ ಹಾಗೂ ಬಾಲಕಿಯರಿಗೆ ರಾಜ್ಯ ಸರ್ಕಾರ ವಿದ್ಯಾರ್ಥಿವೇತನವನ್ನು ಘೋಷಣೆ ಮಾಡಿದೆ.
ಈ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಹಾಗಾದರೆ ಅರ್ಜಿ ಸಲ್ಲಿಸುವುದಕ್ಕೆ ಯಾವೆಲ್ಲ ದಾಖಲೆಗಳು ಬೇಕು ಅರ್ಜಿ ಸಲ್ಲಿಸುವುದಕ್ಕೆ ವಿದ್ಯಾರ್ಥಿಯು ಯಾವ ಅರ್ಹತೆಯನ್ನು ಹೊಂದಿರಬೇಕು ಎಂಬುದರ ಸಂಪೂರ್ಣವಾದ ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸಿಕೊಡುತ್ತೆವೆ.
ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳು ಹತ್ತು ತಿಂಗಳವರೆಗೆ ಎರಡು ಸಾವಿರ ರೂಪಾಯಿ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಬಹುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಒಂದು ಪ್ರಕಟಣೆ ಬಂದಿದ್ದು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಯಾವ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿವೇತನ ಬರುತ್ತದೆ ಎಂಬುದರ ಬಗ್ಗೆ ನೋಡುವುದಾದರೆ ಮೊದಲನೆಯದಾಗಿ ಅಲೆಮಾರಿ ಅಥವಾ ಅರೆಅಲೆಮಾರಿ ವಿದ್ಯಾರ್ಥಿಗಳಿಗೆ ಬಾಲಕ ಮತ್ತು ಬಾಲಕಿಯರಿಗೆ ಹತ್ತು ತಿಂಗಳ ಅವಧಿಗೆ ಒಟ್ಟು ಎರಡು ಸಾವಿರ ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತದೆ.
ಎರಡನೆಯದಾಗಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಎಷ್ಟಿರುತ್ತದೆ ಎನ್ನುವುದನ್ನು ನೋಡುವುದಾದರೆ ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳಿಗೆ ಎರಡು ನೂರಾ ಐವತ್ತು ಇದರ ಜೊತೆಗೆ ಆಡ್ ಹ್ಯಾಕ್ ಗ್ರಾಂಟ್ ಐದು ನೂರು ರೂಪಾಯಿ ಒಟ್ಟು ಏಳೂ ನೂರಾ ಐವತ್ತು ರೂಪಾಯಿ, ಆರರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ನಾಲ್ಕುನೂರು ರೂಪಾಯಿ ಜೊತೆಗೆ ಆಡ್ ಹ್ಯಾಕ್ ಗ್ರಾಂಟ್ ಐದು ನೂರು ರೂಪಾಯಿ ಒಟ್ಟು ಒಂಬೈನೂರು ರೂಪಾಯಿ, ಒಂಬತ್ತರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಐದು ನೂರು ರೂಪಾಯಿ ಜೊತೆಗೆ ಆಡ್ ಹ್ಯಾಕ್ ಗ್ರಾಂಟ್ ಐದು ನೂರು ರೂಪಾಯಿ ಒಟ್ಟು ಒಂದು ಸಾವಿರ ರೂಪಾಯಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿಗಳು ನವೆಂಬರ್ ಇಪ್ಪತ್ತೊಂದು ಎರಡು ಸಾವಿರದ ಇಪ್ಪತ್ತೊಂದರೋಳಗಾಗಿ ವಿದ್ಯಾರ್ಥಿವೇತನವನ್ನು ಪಡೆಯುವುದಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ವಿದ್ಯಾರ್ಥಿವೇತನವನ್ನು ಪಡೆಯುವುದಕ್ಕೆ ವಿದ್ಯಾರ್ಥಿಗಳು ಯಾವ ಅರ್ಹತೆಯನ್ನು ಹೊಂದಿರಬೇಕು ಎಂದರೆ ಒಂದರಿಂದ ಹತ್ತನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಿರುತ್ತಾರೆ.
ಅಲೆಮಾರಿ ಅಥವಾ ಅರೆ ಅಲೆಮಾರಿ ವಿದ್ಯಾರ್ಥಿವೇತನ ಪಡೆಯುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ ಎರಡು.ಐದು ಲಕ್ಷಕ್ಕಿಂತ ಕಡಿಮೆ ಇರಬೇಕು. ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನ ಪಡೆಯುವ ಪ್ರವರ್ಗ ಒಂದರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ ಒಂದು ಲಕ್ಷ ಮೀರಿರಬಾರದು. ಇತರ ವಿದ್ಯಾರ್ಥಿಗಳ ವಾರ್ಷಿಕ ವರಮಾನ ನಾಲವತ್ನಾಲ್ಕು ಸಾವಿರದ ಐದು ನೂರು ರೂಪಾಯಿ ಮೀರಿರಬಾರದು. ಪ್ರವರ್ಗ ಒಂದು ಮತ್ತು ಅಲೆಮಾರಿ ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಲಾಗುತ್ತದೆ. ತದನಂತರ ಇನ್ನುಳಿದ ವಿದ್ಯಾರ್ಥಿಗಳಿಗೆ ಆದಾಯ ಮತ್ತು ಮೆರಿಟ್ ಆಧಾರದ ಮೇಲೆ ರಾಜ್ಯ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲಾಗುವುದು.
ಈ ಒಂದು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವಾಗ ಯಾವೆಲ್ಲ ದಾಖಲೆಗಳು ಬೇಕಾಗುತ್ತದೆ ಎಂದರೆ ಶಾಲೆ ಪ್ರವೇಶ ಪಡೆದಿರುವ ಬಗ್ಗೆ ಸ್ಯಾಟ್ಸ್ ಐಡಿ, ವಿದ್ಯಾರ್ಥಿಯ ಆಧಾರ್ ಸಂಖ್ಯೆ, ಪೋಷಕರ ಆಧಾರ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಆರ್ ಡಿ ಸಂಖ್ಯೆ, ಆದಾಯ ಪ್ರಮಾಣ ಪತ್ರದ ಆರ್ ಡಿ ಸಂಖ್ಯೆ, ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಪಡೆದಿದ್ದಲ್ಲಿ ವಿದ್ಯಾರ್ಥಿನಿಲಯದ ಪ್ರವೇಶ ಸಂಖ್ಯೆ, ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿವೇತನವನ್ನು ಪಡೆದಿದ್ದಲ್ಲಿ ಅದರ ಅರ್ಜಿ ಸಂಖ್ಯೆ, ಬ್ಯಾಂಕ್ ಖಾತೆ ನಂಬರ್ ಐಎಫ್ಎಸ್ಸಿ ಕೋಡ್ ಬ್ಯಾಂಕ್ ನ ವಿಳಾಸ, ಪೋಷಕರ ಆಧಾರ್ ಕಾರ್ಡ್ ಗೆ ಲಿಂಕ್ ಮಾಡಿರುವ ಮೊಬೈಲ್ ನಂಬರ್ ಮತ್ತು ಭೌತಿಕ ಅನುಮತಿ ಪತ್ರ.
ಈ ಎಲ್ಲ ದಾಖಲೆಗಳೊಂದಿಗೆ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯುವುದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಯಾರೆಲ್ಲಾ ವಿದ್ಯಾರ್ಥಿವೇತನವನ್ನು ಪಡೆಯುವುದಕ್ಕೆ ಅರ್ಹರಿದ್ದಾರೆ ಅವರು ಈಗಲೇ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸುವ ಮೂಲಕ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಿ ಜೊತೆಗೆ ಈ ಮಾಹಿತಿಯನ್ನು ಇತರರಿಗೂ ತಿಳಿಸಿರಿ.
ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430