ನಾವಿಂದು ನಿಮಗಾಗಿ ಹೊಸ ಉದ್ಯೋಗ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ. ನೀವು ಖಾಸಗಿ ವಲಯದಲ್ಲಿ ಉದ್ಯೋಗವನ್ನು ಹುಡುಕುತ್ತಿದ್ದರೆ ನಾವಿಂದು ನಿಮಗೆ ಖಾಸಗಿ ವಲಯದಲ್ಲಿ ಯಾವ ಹುದ್ದೆಯ ಭರ್ತಿಗಾಗಿ ಅರ್ಜಿಯನ್ನು ಕರೆಯಲಾಗಿದೆ ಯಾರು ಅರ್ಜಿಯನ್ನು ಸಲ್ಲಿಸಬಹುದು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಯನ್ನು ಹೊಂದಿರಬೇಕು ಎಂಬುದರ ಕುರಿತಾದ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ.
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ಅಭ್ಯರ್ಥಿಗಳ ಆಯ್ಕೆಗೆ ಲಿಖಿತ ಪರೀಕ್ಷೆ ಇರುವುದಿಲ್ಲ. ಈ ಒಂದು ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಹಾಗೂ ಪುರುಷ ಅಭ್ಯರ್ಥಿಗಳು ಇಬ್ಬರು ಕೂಡ ಅರ್ಜಿಯನ್ನು ಸಲ್ಲಿಸಬಹುದು. ಭಾರತದಿಂದ ಯಾವುದೇ ಪ್ರದೇಶದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿ ನಡೆಯುತ್ತಿರುವುದು ಇಂಡಿಗೋ ಏರ್ಲೈನ್ಸ್ ನೇಮಕಾತಿ ಎರಡು ಸಾವಿರದ ಇಪ್ಪತ್ತೊಂದು ಮತ್ತು ವಿಮಾನನಿಲ್ದಾಣ ಉದ್ಯೋಗ ನೇಮಕಾತಿ ಎರಡು ಸಾವಿರದ ಇಪ್ಪತ್ತೊಂದು. ವಿಮಾನ ನಿಲ್ದಾಣದಲ್ಲಿ ಕೆಲಸವನ್ನು ಮಾಡಬೇಕು ಎಂದು ಬಯಸುವರಿಗೆ ಇದೊಂದು ಸುವರ್ಣಾವಕಾಶ ಎಂದು ಹೇಳಬಹುದು.
ವಿಮಾನ ನಿಲ್ದಾಣದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಲು ಸೂಚಿಸಿದೆ. ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಮತ್ತು ಪದವಿ ಶಿಕ್ಷಣವನ್ನು ಮುಗಿಸಿರಬೇಕು. ಹದಿನೆಂಟು ವರ್ಷದಿಂದ ಮೂವತ್ತೆರಡು ವರ್ಷ ಒಳಗಿನ ಅಭ್ಯರ್ಥಿಗಳು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ಒಂದು ಹುದ್ದೆಯಲ್ಲಿ ಅನುಭವ ಇರುವವರು ಇಲ್ಲದಿರುವವರು ಇಬ್ಬರೂ ಕೂಡ ಅರ್ಜಿ ಸಲ್ಲಿಸಬಹುದು. ದೂರವಾಣಿ ಕರೆ ಮಾಡುವ ಮೂಲಕ ಸಂದರ್ಶನವನ್ನು ತೆಗೆದುಕೊಳ್ಳಲಾಗುತ್ತದೆ ಆ ಸಮಯದಲ್ಲಿ ಸಂಬಳವನ್ನು ನಿರ್ಧರಿಸಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಡಿಗೋ ಏರ್ಲೈನ್ಸ್ ನ ಅಫೀಷಿಯಲ್ ವೆಬ್ಸೈಟ್ ನಲ್ಲಿ ಹೋಗಿ ಅರ್ಜಿಯನ್ನು ಸಲ್ಲಿಸಬೇಕು.
ಇಂಡಿಗೋ ಏರ್ಲೈನ್ಸ್ ವಿಭಾಗದಲ್ಲಿ ಒಟ್ಟು ನಲವತ್ತೊಂಬತ್ತು ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಯಾರಿಗೆಲ್ಲ ಏರ್ಲೈನ್ಸ್ ವಿಭಾಗದಲ್ಲಿ ಉದ್ಯೋಗ ಮಾಡುವ ಆಸೆ ಇದೆ ಅವರು ಅರ್ಜಿಯನ್ನು ಸಲ್ಲಿಸಬಹುದು ಅಫಿಶಿಯಲ್ ವೆಬ್ ಸೈಟ್ ಅನ್ನು ತೆರೆದು ಇ-ಮೇಲ್ ಪಾಸ್ವರ್ಡ್ ಅನ್ನು ಹಾಕಿ ಲಾಗಿನ್ ಆಗಿ ನೀವು ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವುದಕ್ಕೆ ಯಾವುದೇ ರೀತಿಯಾದಂತಹ ಅರ್ಜಿ ಶುಲ್ಕ ಇರುವುದಿಲ್ಲ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಜೊತೆಗೆ ನಿಮ್ಮ ಸ್ನೇಹಿತರು ಹಾಗೂ ಪರಿಚಿತರಿಗು ಈ ಉದ್ಯೋಗ ಮಾಹಿತಿಯ ಬಗ್ಗೆ ತಿಳಿಸಿರಿ.