ಡಾ. ವಿಷ್ಣುವರ್ಧನ್ ಅವರು ಮೈಸೂರಿನಲ್ಲಿ ಹೆಚ್ ಎಲ್ ನಾರಾಯಣರಾವ್ ಮತ್ತು ಕಾಮಾಕ್ಷಮ್ಮ ಎಂಬ ದಂಪತಿಗಳ ಮಗನಾಗಿ 18 ಸೆಪ್ಟೆಂಬರ್ 1950 ರಲ್ಲಿ ಜನಿಸಿದ್ದರು. ಇವರ ತಂದೆ ಕಲಾವಿದರು, ಸಂಗೀತ ನಿರ್ದೇಶಕರು ಮತ್ತು ಸಂಭಾಷಣೆಕಾರರು ಆಗಿದ್ದರು. ಇವರ ಕುಟುಂಬದವರು ಮೈಸೂರಿನ ಚಾಮುಂಡಿಪುರಂನಲ್ಲಿ ವಾಸಿಸುತ್ತಿದ್ದರು. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ಶಿಕ್ಷಣ ಮುಗಿಸಿ, ಪ್ರೌಢಶಾಲಾ ಶಿಕ್ಷಣ ಮತ್ತು ಪದವಿಯನ್ನು ಬೆಂಗಳೂರಿನ ಬಸವನಗುಡಿಯಲ್ಲಿರುವ ನ್ಯಾಷನಲ್ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ. ಕನ್ನಡ ಚಿತ್ರರಂಗದ ದಿಗ್ಗಜ ನಟರಲ್ಲಿ ವಿಷ್ಣುವರ್ಧನ್ ಒಬ್ಬರು. ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರಾಗಿತ್ತು.
ಕನ್ನಡ ಚಿತ್ರರಂಗದಲ್ಲಿ ನಟಿಸಲು ಪ್ರಾರಂಭಿದಾಗ ಇವರಿಗೆ ವಿಷ್ಣುವರ್ಧನ್ ಎಂದು ಕರೆಯಲಾಗಿತ್ತು. ಸಾಹಸಸಿಂಹ ಎಂಬ ಬಿರುದು ಪಡೆದ ಡಾ.ವಿಷ್ಣುವರ್ಧನ್ ಅವರು ಒಟ್ಟು ಸುಮಾರು 200 ಕ್ಕು ಅಧಿಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವಾರು ತಮಿಳು, ತೆಲುಗು, ಮಲಯಾಳಂ, ಹಿಂದಿ ಸಿನೆಮಾಗಳಲ್ಲೂ ನಟಿಸಿದ್ದಾರೆ. ವಿಷ್ಣುವರ್ಧನ್ ದಕ್ಷಿಣ ಭಾರತದ ಖ್ಯಾತ ನಟಿ ಭಾರತಿ ಅವರನ್ನು ಮದುವೆಯಾಗಿದ್ದರು. ಎಸ್ ಎಲ್ ಭೈರಪ್ಪನವರ ಕಾದಂಬರಿಯಾಧಾರಿತ ವಂಶವೃಕ್ಷ ಇದರಲ್ಲಿ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡರು.
1972 ರಲ್ಲಿ ಬಿಡುಗಡೆಯಾದ ಪುಟ್ಟಣ್ಣ ಕಣಗಾಲ್ ನಿರ್ದೇಶನದ “ನಾಗರಹಾವು” ಇವರ ಮೊದಲ ಚಿತ್ರದಲ್ಲಿ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಂಪತ್ ಕುಮಾರನಾಗಿ ಬಂದಿದ್ದ ಹುಡುಗನಿಗೆ ‘ವಿಷ್ಣುವರ್ಧನ್’ ಎಂದು ಹೆಸರಿಟ್ಟಿದ್ದು ಪುಟ್ಟಣ್ಣ ಕಣಗಾಲ್. ಹೆಸರಿನ ಬದಲಾವಣೆಯೊಂದಿಗೆ ನಾಯಕನಟನಾಗಿ ನಾಗರಹಾವು ಚಿತ್ರದೊಂದಿಗೆ ವಿಷ್ಣುವರ್ಧನ ಎಂದು ಜನಪ್ರಿಯರಾಗಿದ್ದರು.1980 ರಲ್ಲಿ ಶಂಕರ್ ನಾಗ್ ನಿರ್ದೇಶನದಲ್ಲಿ ಮೂಡಿಬಂದ “ಮಾಲ್ಗುಡಿ ಡೇಸ್” ಎಂಬ ಕಿರುತೆರೆಯಲ್ಲಿ ನಟಿಸಿದರು .
ನಟನೆಯಲ್ಲದೇ ಕಿಲಾಡಿ ಕಿಟ್ಟು, ನಾಗ ಕಾಳ ಭೈರವ, ಸಾಹಸಸಿಂಹ , ಜಿಮ್ಮಿಗಲ್ಲು, ಖೈದಿ, ಮೋಜುಗಾರ ಸೊಗಸುಗಾರ, ವಿಷ್ಣುಸೇನಾ ಮೊದಲಾದ ಕೆಲವು ಚಿತ್ರಗಳಲ್ಲಿ ಹಿನ್ನೆಲೆ ಗಾಯನವನ್ನೂ ಕೂಡ ಮಾಡಿದ್ದಾರೆ. ಹೀಗೆ ಕನ್ನಡ ಸಿನಿಮಾಗಳಲ್ಲಿ ನಟಿಸಿ ಇಡೀ ಚಿತ್ರರಂಗದಲ್ಲಿಯೇ ಸುಪ್ರಸಿದ್ಧ ನಟರಾಗಿ ಹೊರಹೊಮ್ಮಿದ್ದರು.
ಹೀಗೆ ಕೇವಲ ಕನ್ನಡ ಚಿತ್ರಗಳಲ್ಲಿ ನಟಿಸದೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಸಿನೆಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು. ಕನ್ನಡ ಚಿತ್ರರಂಗಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ ವಿಷ್ಣುವರ್ಧನ್ ಅವರು 30 ಡಿಸೆಂಬರ್ 2009 ರಲ್ಲಿ ವಿಧಿವಶರಾದರು. ವಿಷ್ಣುವರ್ಧನ್ ಹಾಗೂ ಭಾರತಿ ವಿಷ್ಣುವರ್ಧನ್ ಅವರಿಗೆ ಮಕ್ಕಳು ಇಲ್ಲದ ಕಾರಣ ಅವರು ಇಬ್ಬರು ಹೆಣ್ಣುಮಕ್ಕಳನ್ನು ದತ್ತು ತೆಗೆದುಕೊಂಡಿದ್ದರು. ಇವರಿಗೆ ಕೀರ್ತಿ ಮತ್ತು ಚಂದನಾ ಎಂಬ ಇಬ್ಬರು ದತ್ತು ಪುತ್ರಿಯರಿದ್ದಾರೆ. ವಿಷ್ಣುವರ್ಧನ್ ಅವರ ಒಬ್ಬಳು ಮಗಳು ಚಿತ್ರರಂಗ ಹಾಗೂ ಮೀಡಿಯಾ ಗಳಿಂದಲೆ ದೂರವಾಗಿದ್ದಾರೆ. ವಿಷ್ಣುವರ್ಧನ್ ಅವರ ಇನ್ನೊಬ್ಬ ಮಗಳು ಕೀರ್ತಿ ಇವರು ವಿಷ್ಣುವರ್ಧನ್ ಅವರು ಚಿತ್ರರಂಗದಲ್ಲಿ ತಮ್ಮನ್ನು ಸಕ್ರಿಯರಾಗಿ ತೊಡಗಿಸಿಕೊಂಡಿದ್ದು ಸಾಮಾನ್ಯವಾಗಿ ವಿಷ್ಣುವರ್ಧನ್ ಅವರ ಪ್ರತಿಯೊಂದು ಚಿತ್ರಕ್ಕೂ ಸಹ ಅವರ ವಸ್ತ್ರ ವಿನ್ಯಾಸವನ್ನು ಮಾಡುತ್ತಿದ್ದುದ್ದರು.
ವಿಷ್ಣುವರ್ಧನ್ ಅವರ ಮರಣದ ನಂತರವೂ ಕೂಡಾ ಅವರ ಕುಟುಂಬದ ಪರವಾಗಿ ಮೀಡಿಯಾ ಮುಂದೆ ಬಂದಿದ್ದು ಕೀರ್ತಿ ಅವರೇ. ಕೀರ್ತಿ ವಿಷ್ಣುವರ್ಧನ್ ಅವರು ಅನಿರುಧ್ ಅವರನ್ನು ವಿವಾಹ ಆಗಿದ್ದು , ಅನೀರುಧ್ ಅವರೂ ಕೂಡಾ ಒಬ್ಬ ನಾಯಕ ನಟ. ಪ್ರಸ್ತುತ ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಆರ್ಯವರ್ಧನ್ ಪಾತ್ರಧಾರಿಯಾಗಿ ಅನಿರುಧ್ ಅಭಿನಯ ಮಾಡುತ್ತಿದ್ದು , ಈಗ ಸೆನ್ಸೇಷನಲ್ ಸ್ಟಾರ್ ಎಂದೇ ಹೆಸರಾಗಿದ್ದಾರೆ. ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಅಭಿನಯಿಸುತ್ತಿರುವ ಅನಿರುಧ್ ಅವರಿಗೆ ಕೂಡಾ ವಸ್ತ್ರ ವಿನ್ಯಾಸ ಮಾಡುತ್ತಿರುವುದು ಕೂಡಾ ಅವರ ಮಡದಿ ಕೀರ್ತಿ ಅವರೇ. ಫ್ಯಾಷನ್ ಡಿಸೈನರ್ ಆಗಿರುವ ಕೀರ್ತಿ ಅವರಿಗೆ ಇತ್ತೀಚೆಗೆ ಅಷ್ಟೇ ಅವರ ವಸ್ತ್ರ ವಿನ್ಯಾಸದ ಶೈಲಿಯನ್ನು ಮೆಚ್ಚಿ ಸನ್ಮಾನ ಮಾಡಿ ಪ್ರಶಸ್ತಿಯನ್ನು ಸಹ ನೀಡಲಾಗಿದೆ. ಇದರ ಕುರಿತಾಗಿ ಅನಿರುಧ್ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ತಮ್ಮ ಮಡದಿಯ ಕುರಿತು ಕೆಲವು ಸಾಲುಗಳನ್ನು ಬರೆದು ಫೋಟೋ ಹಂಚಿಕೊಂಡಿದ್ದರು. ಕೀರ್ತಿ ಹಾಗೂ ಅನಿರುಧ್ ಅವರಿಗೆ ಇಬ್ಬರು ಮುದ್ದಾದ ಮಕ್ಕಳಿದ್ದು ಮೊದಲನೇ ಮಗನ ಹೆಸರು ಜೇಷ್ಠ ವರ್ಧನ್ ಎಂದೂ ಮಗಳ ಹೆಸರು ಶ್ಲೋಕ ಎಂದು ಹೆಸರಿಟ್ಟಿದ್ದಾರೆ. ಮಕ್ಕಳ ಜೊತೆಗಿನ ಫೋಟೋ ಹಾಗೂ ವೀಡಿಯೊಗಳನ್ನು ಕೂಡಾ ಕೀರ್ತಿ ಹಾಗೂ ಅನಿರುಧ್ ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ.