ಶ್ರೀ ಗುರು ರಾಘವೇಂದ್ರ ಸ್ವಾಮಿ ಅವರ ಪತ್ನಿ ಬಾವಿಗೆ ಹಾರಿ ಪ್ರಾ’ಣ ಕೊಡಲು ನಿಜವಾದ ಕಾರಣವೇನು?

0

ಶ್ರೀ ರಾಘವೇಂದ್ರ ಸ್ವಾಮಿಗಳು ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ. ಶ್ರೀ ಪ್ರಹ್ಲಾದ ರಾಯರ ಮೂರನೇ ಅವತಾರವೇ ಶ್ರೀ ರಾಘವೇಂದ್ರರು. ಎರಡನೆಯ ಅವತಾರವು ಶ್ರೀ ವ್ಯಾಸರಾಯರು. ಶ್ರೀ ಗುರು ರಾಘವೇಂದ್ರ ಸ್ವಾಮಿಗಳನ್ನು ಭಕ್ತರು ರಾಯರು, ಗುರುರಾಯರು, ಗುರುರಾಜರು ಎಂದು ಭಕ್ತಿಯಿಂದ ಕರೆಯುತ್ತಾರೆ.

ಇವರ ಮೂಲ ಬೃಂದಾವನವು (ಸಶರೀರ) ಈಗಿನ ಆಂಧ್ರ ಪ್ರದೇಶದ ತುಂಗಭದ್ರಾ ನದಿ ತಟದಲ್ಲಿರುವ ಮಂತ್ರಾಲಯದಲ್ಲಿದೆ. ಕರ್ನಾಟಕದ ರಾಯಚೂರಿನಿಂದ ಸುಮಾರು ೧ ಘಂಟೆ ಪ್ರಯಾಣ. ಇಲ್ಲಿಗೆ ನಿತ್ಯವು ಸಾವಿರಾರು ಭಕ್ತರು ಭೆಟ್ಟಿ ಕೊಡುತ್ತಾರೆ. ಪ್ರತಿ ವರ್ಷ ಶ್ರಾವಣ ಕೃಷ್ಣ ಪಕ್ಷ ಪಾಡ್ಯದಿಂದ ಶ್ರಾವಣ ಕೃಷ್ಣ ಪಕ್ಷ ತದಗಿವರೆಗೂ ಭವ್ಯ ಆರಾಧನೆ ನಡೆಯುತ್ತದೆ.

ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಪೂರ್ವಾಶ್ರಮದ ಹೆಸರು ವೆಂಕಟನಾಥ. ಇವರಿಗೆ ವೆಂಕಣ್ಣಭಟ್ಟ, ವೆಂಕಟಾಚಾರ್ಯ ಎಂದೂ ಕರೆಯುವರು ಇವರ ತಂದೆಯ ಹೆಸರು ತಿಮ್ಮಣ್ಣ ಭಟ್ಟ. ತಾಯಿಯ ಹೆಸರು ಗೋಪಿಕಾಂಬ. ತಿಮ್ಮಣ್ಣ ಭಟ್ಟರ ತಾತನ ಹೆಸರು ಕೃಷ್ಣ ಭಟ್ಟ. ಕೃಷ್ಣ ಭಟ್ಟರು ವೀಣೆಯಲ್ಲಿ ಪಂಡಿತರು. ವಿಜಯನಗರದ ರಾಜನಾದ ಕೃಷ್ಣದೇವರಾಯನಿಗೆ ವೀಣೆ ಕಲಿಸಿದ ಗುರುಗಳು. ತಿಮ್ಮಣ್ಣ ಭಟ್ಟರಿಗೆ ವೆಂಕಟನಾಥನನ್ನು ಬಿಟ್ಟು ಇನ್ನೂ ಇಬ್ಬರು ಮಕ್ಕಳು. ಗುರುರಾಜ ಮತ್ತು ವೆಂಕಟಾಂಬ ಅವರ ಹೆಸರು. ವೆಂಕಟನಾಥನು ೧೫೯೫ ರಲ್ಲಿ ಈಗಿನ ತಮಿಳುನಾಡುವಿನ ಭುವನಗಿರಿ ಎಂಬಲ್ಲಿ ಜನಿಸಿದನು.
ವೆಂಕಟನಾಥನು ಬಾಲ್ಯದಲ್ಲಿಯೇ ತುಂಬಾ ಬುದ್ಧಿವಂತ ಬಾಲಕನಾಗಿದ್ದನು. ಇವರ ತಂದೆ ಚಿಕ್ಕ ವಯಸ್ಸಿನಲ್ಲೆ ವಿಧಿವಶರಾಗಿದ್ದರಿಂದ ಸಂಸಾರದ ಜವಾಬ್ದಾರಿ ಎಲ್ಲ ಅಣ್ಣ ಗುರುರಾಜನ ಮೇಲೆ ಇತ್ತು. ಇವರ ಪ್ರಾರಂಭಿಕ ವಿದ್ಯಾಭ್ಯಾಸ ಇವರ ಸೋದರಮಾವನಾದ ಮಧುರೈನ ಲಕ್ಷ್ಮಿ ನರಸಿಂಹಾಚಾರ್ಯರಲ್ಲಿ ಆಯಿತು.

ಮಧುರೈನಿಂದ ಹಿಂತಿರುಗಿದ ಮೇಲೆ ಇವರ ವಿವಾಹವು ಸರಸ್ವತಿ ಎಂಬ ಕನ್ಯೆಯೊಡನೆ ಆಯಿತು. ವಿವಾಹಾನಂತರ ಇವರು ಕುಂಭಕೋಣಕ್ಕೆ ಬಂದು ಶ್ರೀ ಸುಧೀಂದ್ರ ತೀರ್ಥರಲ್ಲಿ ದ್ವೈತ ವೇದಾಂತ ವ್ಯಾಸಂಗ ಮಾಡತೊಡಗಿದರು. ಅಲ್ಲಿಯೇ ಮಕ್ಕಳಿಗೆ ಸಂಸ್ಕೃತ ಮತ್ತು ವೇದಗಳನ್ನು ಕಲಿಸುತ್ತಿದ್ದರು. ಯಾರಿಂದಲೂ ಫಲಾಪೇಕ್ಷೆ ಇಲ್ಲದೇ ಎಲ್ಲರಿಗೂ ವಿದ್ಯಾದಾನ ಮಾಡುತ್ತಿದ್ದರು.ಅವರ ಆರ್ಥಿಕ ಸ್ಥಿತಿ ಆಗ ಚೆನ್ನಾಗಿರಲಿಲ್ಲ. ಎಷ್ಟೋ ಸಲ ತಮ್ಮ ಹೆಂಡತಿ ಮಕ್ಕಳೊಂದಿಗೆ ಉಪವಾಸ ಇರಬೇಕಾದ ಪರಿಸ್ಥಿತಿಯಲ್ಲಿಯೂ ಸಹ ದೇವರಲ್ಲಿ ನಂಬಿಕೆ ಕಳೆದುಕೊಳ್ಳಲಿಲ್ಲ ಹಾಗೂ ದೇವರ ನಾಮಸ್ಮರಣೆ ಬಿಡಲಿಲ್ಲ.

ಒಮ್ಮೆ ವೆಂಕಟನಾಥರಿಗೆ ಪತ್ನಿ ಮತ್ತು ಮಗನ ಸಮೇತ ಒಂದು ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನವಿತ್ತು. ಆದರೆ ಆಹ್ವಾನವಿತ್ತವರು ಇವರಿಗೆ ಸರಿಯಾದ ಗೌರವ ನೀಡದೆ ಗಂಧ ಅರಿಯುವ ಕೆಲಸ ನೀಡಿದರು. ವೆಂಕಟನಾಥರು ಆದರೂ ಬೇಸರಿಸದೆ ಕೊಟ್ಟ ಗಂಧದ ಕೊರಡನ್ನು ಪದ್ಧತಿಯ ಪ್ರಕಾರ ಅಗ್ನಿ ಸೂಕ್ತ ಪಠಿಸುತ್ತ ತೇಯ್ದರು. ತೇಯ್ದ ಗಂಧವನ್ನು ಲೇಪಿಸಿಗೊಂಡ ವಿಪ್ರರಿಗೆ ವಿಪರೀತ ಉರಿ ಶುರುವಾಯಿತು. ಹೀಗಾಗಲು ಕಾರಣ ಹುಡುಕಿ ಹೊರಟ ಮುಖ್ಯಸ್ಥರು ವೆಂಕಟನಾಥನನ್ನು ಕಾರಣ ಕೇಳಿದರು. ವೆಂಕಟನಾಥರು ಅಗ್ನಿ ಸೂಕ್ತ ಉಚ್ಛರಿಸುತ್ತ ಗಂಧ ತೇಯ್ದಿರುವದಾಗಿ ಹೇಳಿ, ಅದರಿಂದಲೇ ಹೀಗಾಗಿರಬಹುದೆಂದು ಊಹಿಸಿದರು. ಮತ್ತು ವರುಣ ಮಂತ್ರವನ್ನು ಪಠಿಸಿದಾಗ ಸರ್ವರ ಉರಿಯು ಶಮನವಾಯಿತು. ಇದು ವೆಂಕಟನಾಥರ ಸ್ತೋತ್ರದ ಶಕ್ತಿ.

ಶ್ರೀ ಸುಧೀಂದ್ರ ತೀರ್ಥರು ತಮ್ಮ ಉತ್ತರಾಧಿಕಾರಿಯನ್ನು ಹುಡುಕುತ್ತಿರುವಾಗ, ಅವರ ಕನಸಿನಲ್ಲಿ ದೇವರೇ ಬಂದು ವೆಂಕಟನಾಥನನ್ನು ಸೂಚಿಸಿದರು. ಈ ವಿಷಯವನ್ನು ಶ್ರೀ ಸುಧೀಂದ್ರ ತೀರ್ಥರು ವೆಂಕಟನಾಥನಿಗೆ ತಿಳಿಸಿದಾಗ, ವೆಂಕಟನಾಥನು, ಪತ್ನಿ ಮತ್ತು ಮಗನನ್ನು ನೆನಸಿ ನಕಾರತ್ಮಕ ಉತ್ತರ ಕೊಟ್ಟರು. ಅದರೆ ಮನೆಯಲ್ಲಿ, ಸಾಕ್ಷಾತ್ ಸರಸ್ವತೀ ದೇವಿಯೇ ಸ್ವಪ್ನದಲ್ಲಿ ಕಂಡು ಸನ್ಯಾಸಾಶ್ರಮ ಸ್ವೀಕರಿಸಲು ಆಜ್ಞೆಯಿತ್ತಳು. ಇದರಿಂದ ಮನಸ್ಸನ್ನು ಬದಲಿಸಿದ ವೆಂಕಟನಾಥನು ಫಾಲ್ಗುಣ ಶುದ್ಧ ಬಿದಿಗೆ ಯಂದು ತಂಜಾವೂರಿನಲ್ಲಿ ತನ್ನ ಗುರುಗಳಾದ ಶ್ರೀ ಸುಧೀಂದ್ರ ತೀರ್ಥರ ಸಮ್ಮುಖದಲ್ಲಿ ಸನ್ಯಾಸಾಶ್ರಮ ವನ್ನು ಸ್ವೀಕರಿಸಿ ಶ್ರೀ ರಾಘವೇಂದ್ರ ಸ್ವಾಮಿಗಳೆಂದು ನಾಮಾಂಕಿತರಾದರು.

ಸನ್ಯಾಸಾಶ್ರಮದ ಸುದ್ದಿ ತಿಳಿಯುತ್ತಲೇ ಮನನೊಂದ ಪತ್ನಿ ಸರಸ್ವತಿಯು ಭಾವಿಯಲ್ಲಿ ಬಿದ್ದು ಆತ್ಮಹತ್ತೆ ಮಾಡಿಕೊಂಡು ಪಿಶಾಚಿ ಜನ್ಮ ತಾಳಿ ಶ್ರೀ ರಾಘವೇಂದ್ರ ಸ್ವಾಮಿಗಳಿದ್ದಲ್ಲಿಗೆ ಬಂದಳು. ತಮ್ಮ ಪೂರ್ವಾಶ್ರಮದ ಪತ್ನಿಯನ್ನು ಈ ಅವತಾರದಲ್ಲಿ ನೋಡಿ ತೀರ್ಥವನ್ನು ಆಕೆಯ ಮೇಲೆ ಸಂಪ್ರೊಕ್ಷಿಸಿ ಆಕೆಗೆ ಮೋಕ್ಷ ದೊರೆಯುವಂತೆ ಮಾಡಿಕೊಟ್ಟರು.

Leave A Reply

Your email address will not be published.

error: Content is protected !!