ಹಣ್ಣುಗಳಿಂದ ಆರೋಗ್ಯ ಹೆಚ್ಚಾಗುತ್ತದೆ ಆರೋಗ್ಯ ಉತ್ತಮವಾಗಿರಬೇಕಾದರೆ ಹೆಚ್ಚು ಹಣ್ಣುಗಳನ್ನು ಸೇವಿಸಬೇಕು ಪ್ರತಿಯೊಂದು ಹಣ್ಣು ತನ್ನದೆ ಆದ ಆರೋಗ್ಯಕರ ಲಾಭವನ್ನು ಹೊಂದಿದೆ. ಹಣ್ಣುಗಳಲ್ಲಿ ಪ್ರಮುಖ ಹಣ್ಣಾದ ಪಪ್ಪಾಯಿ ಹಣ್ಣಿನಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ ಆದರೆ ಪಪ್ಪಾಯಿ ಹಣ್ಣಿನ ಅತಿಯಾದ ಸೇವನೆಯಿಂದ ಕೆಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಹಾಗಾದರೆ ಪಪ್ಪಾಯಿ ಹಣ್ಣನ್ನು ಅತಿಯಾಗಿ ಸೇವಿಸುವುದರಿಂದ ಆಗುವ ನಷ್ಟಗಳ ಬಗ್ಗೆ ಈ ಲೇಖನದಲ್ಲಿ ನೋಡೋಣ.
ಪಪ್ಪಾಯ ಹಣ್ಣು ಹಳ್ಳಿಗಳಲ್ಲಿ ಸಾಮಾನ್ಯವಾಗಿ ಸಿಗುವ ಹಣ್ಣು. ಈ ಹಣ್ಣನ್ನು ಬಹಳಷ್ಟು ಜನರು ಇಷ್ಟಪಟ್ಟು ತಿನ್ನುತ್ತಾರೆ. ಇದರ ರುಚಿ ಕೆಲವರಿಗೆ ಬಹಳ ಇಷ್ಟವಾಗುತ್ತದೆ. ಈ ಹಣ್ಣನ್ನು ಸೇವಿಸುವುದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತದೆ ಅಲ್ಲದೆ ಗ್ಯಾಸ್, ಅಸಿಡಿಟಿ, ಅಜೀರ್ಣದಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ. ಪಪ್ಪಾಯಿ ಹಣ್ಣಿನಲ್ಲಿ ವಿಟಮಿನ್ ಎ ವಿಟಮಿನ್ ಬಿ ವಿಟಮಿನ್ ಸಿ ಪ್ರೋಟೀನ್ ಫೈಬರ್ ಮೆಗ್ನೀಷಿಯಂ ಮತ್ತು ಪೊಟ್ಯಾಷಿಯಂ ಕಂಡು ಬರುತ್ತದೆ ಆದ್ದರಿಂದ ಈ ಹಣ್ಣನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಪ್ರಯೋಜನಕಾರಿ ಇದೆ.
ಪಪ್ಪಾಯ ಹಣ್ಣಿನಿಂದ ಆರೋಗ್ಯಕ್ಕೆ ಉತ್ತಮ ಲಾಭವಿದ್ದರೂ ಕೆಲವು ರೋಗಗಳಿಂದ ಬಳಲುತ್ತಿರುವವರು ಪಪ್ಪಾಯ ಹಣ್ಣಿನಿಂದ ದೂರವಿರಬೇಕು. ಕೆಲವರಿಗೆ ಅಲರ್ಜಿ ಸಮಸ್ಯೆ ಇರುತ್ತದೆ ಅಂಥವರು ಪಪ್ಪಾಯ ಹಣ್ಣನ್ನು ಕಡಿಮೆ ಸೇವಿಸಬೇಕು ಅಥವಾ ಪೂರ್ಣ ಸೇವಿಸಲೆಬಾರದು ಒಂದು ವೇಳೆ ಅಲರ್ಜಿ ಸಮಸ್ಯೆಯಿಂದ ಬಳಲುತ್ತಿರುವವರು ಪಪ್ಪಾಯ ಹಣ್ಣನ್ನು ಹೆಚ್ಚು ಸೇವಿಸಿದರೆ ಉರಿ, ತುರಿಕೆ ಮೊದಲಾದ ಸಮಸ್ಯೆಗಳು ಹೆಚ್ಚಾಗತ್ತದೆ. ಗರ್ಭಿಣಿಯರು ಪಪ್ಪಾಯಿ ಹಣ್ಣನ್ನು ಸೇವಿಸಬಾರದು ಅತಿಯಾಗಿ ಪಪ್ಪಾಯ ಹಣ್ಣನ್ನು ಸೇವಿಸುವುದರಿಂದ ಗರ್ಭಪಾತವಾಗುವ ಸಾಧ್ಯತೆ ಇರುತ್ತದೆ. ಗರ್ಭಿಣಿಯರು ಪಪ್ಪಾಯ ಹಣ್ಣನ್ನು ಸೇವಿಸಲು ಇಷ್ಟಪಟ್ಟರೆ ಸ್ತ್ರೀರೊಗ ತಜ್ಞರ ಅಭಿಪ್ರಾಯವನ್ನು ಪಡೆಯುವುದು ಒಳ್ಳೆಯದು.
ಆಗಾಗ ಅತಿಸಾರ ಸಮಸ್ಯೆಯಿಂದ ಬಳಲುತ್ತಿರುವವರು ಪಪ್ಪಾಯ ಹಣ್ಣನ್ನು ಹೆಚ್ಚು ಸೇವಿಸಬಾರದು. ಪಪ್ಪಾಯ ಹಣ್ಣು ಜೀರ್ಣಕ್ರಿಯೆ ವ್ಯವಸ್ಥೆಗೆ ಉತ್ತಮ ಎಂದು ಪರಿಗಣಿಸಲಾಗಿದೆ ಆದರೂ ಅತಿಯಾಗಿ ಪಪ್ಪಾಯ ಹಣ್ಣನ್ನು ಸೇವಿಸುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಒಟ್ಟಿನಲ್ಲಿ ಪಪ್ಪಾಯ ಹಣ್ಣು ಆರೋಗ್ಯಕ್ಕೆ ಕೆಲವು ಅಂಶಗಳಲ್ಲಿ ಒಳ್ಳೆಯದಾದರೂ ಹಲವು ಸಮಸ್ಯೆಗಳಿಗೆ ಕಾರಣವಾಗುವುದರಿಂದ ಮಿತವಾಗಿ ಹಿತವಾಗಿ ಸೇವಿಸುವುದು ಉತ್ತಮ. ಪಪ್ಪಾಯ ಹಣ್ಣನ್ನು ಅತಿಯಾಗಿ ಸೇವಿಸಬಾರದು ಇದು ಆರೋಗ್ಯಕ್ಕೆ ಒಳ್ಳೆಯದಲ್ಲ ಆದರೂ ಎಲ್ಲಾ ಹಣ್ಣುಗಳಂತೆ ಪಪ್ಪಾಯ ಹಣ್ಣು ಕೂಡ ಒಂದು ಆರೋಗ್ಯಕರ ಹಣ್ಣು ಎಂಬುದನ್ನು ಅಲ್ಲಗಳೆಯುವಂತಿಲ್ಲ.
ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಅಷ್ಟೇ ಅಲ್ಲದೆ ರಾಜಯೋಗ ವಶ, ಅಖಂಡ ರಾಜಯೋಗವಶಗಳು ಇನ್ನಿತರ ಕಠಿಣ ನಿಗೂಢ ಹಾಗೂ ಗುಪ್ತ ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ. ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ 9880444450 ಮೈಸೂರ್ ಸರ್ಕಲ್ (ಸಿರ್ಸಿ ಸರ್ಕಲ್) ಚಾಮರಾಜಪೇಟೆ ಬೆಂಗಳೂರು