ಮುಂದೆ ಬರುವ 2022 ಸೀಸನ್ ನಲ್ಲಿ RCB ತಂಡದ ನಾಯಕ ಯಾರಾಗಲಿದ್ದಾರೆ ಗೊತ್ತಾ

ಸುದ್ದಿ

ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ ಇವರು ಕ್ರಿಕೆಟ್ ದಿಗ್ಗಜರು ಇವರ ಸಾಲಿಗೆ ಸೇರಿರುವ ಮತ್ತೊಬ್ಬ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಸಾಕಷ್ಟು ಜನರು ಅಭಿಮಾನಿಗಳಿದ್ದಾರೆ. ವಿರಾಟ್ ಕೊಹ್ಲಿ 2008 ರಿಂದ ಆರ್​ಸಿಬಿ ತಂಡದಲ್ಲಿದ್ದಾರೆ. 2013 ರಲ್ಲಿ ನಾಯಕರಾಗಿ ಆಯ್ಕೆಯಾಗಿದ್ದರು. ಆ ಬಳಿಕ ಒಟ್ಟು 140 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ ಕೊಹ್ಲಿ ತಂಡಕ್ಕೆ 66 ಪಂದ್ಯಗಳಲ್ಲಿ ಜಯ ತಂದುಕೊಟ್ಟಿದ್ದಾರೆ. ಅವರು ತಮ್ಮ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದೀಗ ನಾಯಕ ಸ್ಥಾನದ ಬಗ್ಗೆ ಮುಂದಿನ ಬದಲಾವಣೆಗಳೇನು ಎಂಬುದರ ಬಗ್ಗೆ ಸಂಪೂರ್ಣವಾಗಿ ಈ ಲೇಖನದ ಮೂಲಕ ತಿಳಿಯೋಣ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 15ನ ಮೆಗಾ ಹರಾಜಿಗಾಗಿ ಎಲ್ಲಾ ತಂಡಗಳು ಸಿದ್ದತೆ ಮಾಡಿಕೊಂಡಿದೆ. ಅದರಲ್ಲೂ 3 ಫ್ರಾಂಚೈಸಿಗಳು ಹೊಸ ನಾಯಕನ ಹುಡುಕಾಟದಲ್ಲಿದೆ. ಅವುಗಳೆಂದರೆ ಕೆಕೆಆರ್​, ಪಂಜಾಬ್ ಕಿಂಗ್ಸ್​, ಆರ್​ಸಿಬಿ ಫ್ರಾಂಚೈಸಿಗಳು ಹೊಸ ಕ್ಯಾಪ್ಟನ್​ ಅನ್ನು ಆಯ್ಕೆ ಮಾಡಬೇಕಿದೆ. ಈ ಬಾರಿಯ ಐಪಿಎಲ್ ಮುಕ್ತಾಯದ ಬೆನ್ನಲ್ಲೆ ಆರ್​ಸಿಬಿ ತಂಡದ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ ನೀಡಿದ್ದರು. ಕೆಲಸದ ಒತ್ತಡ ಹೆಚ್ಚಾಗಿರುವ ಕಾರಣ ನಾಯಕನಾಗಿ ಮುಂದುವರೆಯಲು ಸಾಧ್ಯವಾಗುತ್ತಿಲ್ಲ ಎಂದು ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ. ಹೀಗಾಗಿಯೆ ಆರ್​ಸಿಬಿ ತಂಡದ ಹೊಸ ನಾಯಕನ ವಿಚಾರ ಇದೀಗ ಭಾರಿ ಚರ್ಚೆಯಲ್ಲಿದೆ ಆದರೆ ಇದೀಗ ಆರ್​ಸಿಬಿ ತಂಡದ ಮುಂದಿನ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಶೀಘ್ರದಲ್ಲೆ ಉತ್ತರ ಸಿಗುವ ಸಾಧ್ಯತೆಯಿದೆ.

ಆರ್ ಸಿಬಿ ಇದೀಗ ವಿರಾಟ್ ಕೊಹ್ಲಿ ಅವರನ್ನೆ ಮತ್ತೊಮ್ಮೆ ನಾಯಕನಾಗಿ ಘೋಷಿಸುವ ಸಾಧ್ಯತೆಯಿದೆ ಎಂಬ ಸುದ್ದಿ ಲಭ್ಯವಾಗಲಿದೆ. ಈ ಬಗ್ಗೆ ಮಾತನಾಡಿರುವ ಆರ್​ಸಿಬಿ ಅಧ್ಯಕ್ಷ ಪ್ರಥಮೇಶ್ ಮಿಶ್ರಾ, ಕೊಹ್ಲಿ ಒಪ್ಪಿದರೆ ಅವರಿಗೆ ಮತ್ತೊಮ್ಮೆ ನಾಯಕತ್ವ ನೀಡಲು ಸಿದ್ದರಿದ್ದೇವೆ ಎಂದು ಹೇಳಿದ್ದಾರೆ. ಅವರು ಒಪ್ಪದಿದ್ದರೆ ನಾವು ಮೆಗಾ ಹರಾಜಿನಲ್ಲಿ ಸೂಕ್ತ ನಾಯಕನ ಖರೀದಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಇದರೊಂದಿಗೆ ಮತ್ತೊಮ್ಮೆ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ನಾಯಕರಾಗಿ ಕಾಣಿಸಿಕೊಂಡರೂ ಅಚ್ಚರಿಯಿಲ್ಲ. ಈ ಹಿಂದೆ ಕೆಲಸದ ಹೊರೆಯಿಂದಾಗಿ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ನಾಯಕತ್ವವನ್ನು ತ್ಯಜಿಸಿದ್ದರು ಆದರೆ ಇದೀಗ ಕೊಹ್ಲಿ ಟೀಮ್ ಇಂಡಿಯಾ ನಾಯಕನ ಜವಾಬ್ದಾರಿಯಿಂದ ಸಂಪೂರ್ಣವಾಗಿ ಕೆಳಗಿಳಿದಿದ್ದಾರೆ. ಹೀಗಾಗಿ ಆರ್​ಸಿಬಿ ಫ್ರಾಂಚೈಸಿ ಮತ್ತೊಮ್ಮೆ ಕೊಹ್ಲಿಗೆ ನಾಯಕನ ಪಟ್ಟ ನೀಡುವ ಸಾಧ್ಯತೆ ಹೆಚ್ಚಿದೆ.

2008 ರಿಂದ ಆರ್​ಸಿಬಿ ತಂಡದಲ್ಲಿರುವ ವಿರಾಟ್ ಕೊಹ್ಲಿ, 2013 ರಲ್ಲಿ ನಾಯಕರಾಗಿ ಆಯ್ಕೆಯಾಗಿದ್ದರು. ಆ ಬಳಿಕ ಒಟ್ಟು 140 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ ಕೊಹ್ಲಿ ತಂಡಕ್ಕೆ 66 ಪಂದ್ಯಗಳಲ್ಲಿ ಜಯ ತಂದುಕೊಟ್ಟಿದ್ದಾರೆ. ಇನ್ನು 70 ಪಂದ್ಯಗಳಲ್ಲಿ ಸೋಲನ್ನು ಕಾಣಬೇಕಾಯಿತು. ಅಷ್ಟೆ ಅಲ್ಲದೆ 2016 ರಲ್ಲಿ ತಂಡವನ್ನು ಫೈನಲ್​ಗೆ ತಲುಪಿಸಿದರೂ ಕಪ್ ಗೆಲ್ಲಲು ಸಾಧ್ಯವಾಗಲಿಲ್ಲ. ಕಳೆದ ಸೀಸನ್ ಐಪಿಎಲ್​ ಮುಕ್ತಾಯದ ಬೆನ್ನಲ್ಲೆ ಕೊಹ್ಲಿ ಆರ್​ಸಿಬಿ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಮತ್ತೊಮ್ಮೆ ಕೊಹ್ಲಿಗೆ ಕ್ಯಾಪ್ಟನ್ಸಿ ಆಫರ್ ನೀಡಲಾಗಿದೆ. ಈ ಆಫರ್​ ಅನ್ನು ಕಿಂಗ್ ಕೊಹ್ಲಿ ಒಪ್ಪಿಕೊಳ್ಳಲಿದ್ದಾರಾ ಎಂಬುದೆ ಈಗ ಕುತೂಹಲ. ಕೊಹ್ಲಿ ಮತ್ತೊಮ್ಮೆ ಕ್ಯಾಪ್ಟನ್ ಆಗಲು ಒಪ್ಪಿಕೊಂಡರೆ ಅವನ ಅಭಿಮಾನಿಗಳು ಖುಷಿಯಾಗಲಿದ್ದಾರೆ. ವಿರಾಟ್ ಒಪ್ಪುತ್ತಾರಾ, ಇಲ್ಲವಾ ಎಂದು ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *