Lakshmi Hebbalkar: ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.

0

Lakshmi Hebbalkar: ಮೊನ್ನೆಯಷ್ಟೇ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯ ಲಾಂಚ್ ಕಾರ್ಯಕ್ರಮಕ್ಕೆ ದೊಡ್ಡ ಮಟ್ಟದಲ್ಲಿ ಜನರು ಆಗಮಿಸಿದ್ದರು. ಮೈಸೂರು, ಕೊಡಗು, ಮಂಡ್ಯ, ಚಾಮರಾಜನಗರ ಸೇರಿದಂತೆ ಸುತ್ತಮುತ್ತಲಿನ ಊರುಗಳಿಂದ ಜನರು ಮೈಸೂರಿಗೆ ಬಂದು ಕಾಂಗ್ರೆಸ್ ಸರ್ಕಾರ ಆಯೋಜಿಸಿದ್ದ ಈ ಬೃಹತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು..

ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ರಾಷ್ಟ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ವಿಶೇಷ ಅತಿಥಿಗಳಾಗಿ ಬಂದಿದ್ದರು. ಇನ್ನುಳಿದ ಹಾಗೆ ಸಿಎಂ ಸಿದ್ದರಾಮಯ್ಯ ಅವರು, ಡಿಸಿಎಂ ಡಿಕೆ ಶಿವಕುಮಾರ್ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರು ಕೂಡ ಕಾರ್ಯಕ್ರಮದಲ್ಲಿ ಮುಖ್ಯಸ್ಥಿಕೆ ವಹಿಸಿಕೊಂಡಿದ್ದರು..

ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯದಲ್ಲಿ ಮನೆಯನ್ನು ನಡೆಸುತ್ತಿರುವ ಎಲ್ಲಾ ಗೃಹಲಕ್ಷ್ಮಿಯರಿಗಾಗಿ ಜಾರಿಗೆ ತರಲಾಗಿದೆ. ರಾಜ್ಯದ ಸುಮಾರು 1.10 ಕೋಟಿ ಹೆಣ್ಣುಮಕ್ಕಳು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ದಾರೆ. ರಾಜ್ಯ ಸರ್ಕಾರದ ಈ ಯೋಜನೆ ಯಶಸ್ವಿಯಾಗಿ ನಡೆಯಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕಾಂಗ್ರೆಸ್ ಪಕ್ಷದ ನಾಯಕರ ಜೊತೆಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡಿದ್ದರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ..

“ಸಾಂಸ್ಕ್ರತಿಕ ನಗರಿ ಮೈಸೂರಿನ ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಸನ್ನಿಧಿಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ Siddaramaiah ಹಾಗೂ ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರೊಂದಿಗೆ ತೆರಳಿ, ದೇವಿಯ ದರ್ಶನ ಆಶೀರ್ವಾದ ಪಡೆಯಲಾಯಿತು. ಇದೇ ವೇಳೆ ಅಮ್ಮನವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ, ನಾಳೆ ‘ಗೃಹಲಕ್ಷ್ಮೀ’ ಯೋಜನೆಯ ಚಾಲನಾ ಸಮಾರಂಭ ಯಶಸ್ವಿಯಾಗಿ ನಡೆಯಲಿ ಎಂದು ಪ್ರಾರ್ಥನೆ ಸಲ್ಲಿಸಿದೆ.

ಈ ಸಮಯದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಸಿ. ಮಹದೇವಪ್ಪ, ಕರ್ನಾಟಕ ಪ್ರದೇಶ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಶ್ರೀಮತಿ ಪುಷ್ಪ ಅಮರನಾಥ್, ವಿಧಾನ ಪರಿಷತ್ ಸದಸ್ಯ Channaraj Hattiholi, ಕೆ ಹರೀಶ್ ಗೌಡ, ಡಿ. ರವಿಶಂಕರ್, ಅನಿಲ್ ಚಿಕ್ಕಮಾದು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು..” ಎಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದು, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಫೋಟೋಸ್ ಶೇರ್ ಮಾಡಿಕೊಂಡಿದ್ದಾರೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು.

Leave A Reply

Your email address will not be published.

error: Content is protected !!
Footer code: