ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ವತಿಯಿಂದ ಹೊಸ ಅಧಿಸೂಚನೆ ಬಿಡುಗಡೆಯಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ರಾಜ್ಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ವಾಟರ್ ಆಪರೇಟರ್ ಹಾಗೂ ಸ್ವಚ್ಛತಾಗಾರರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಅಧಿಸೂಚನೆ ಬಿಡುಗಡೆ ಆಗಿದೆ.

ಕರ್ನಾಟಕದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಈ ನೇಮಕಾತಿಗಳನ್ನು ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳು ಖಾಯಂ ಹುದ್ದೆಗಳಾಗಿ ಇರುತ್ತವೆ. ದ್ವಿತೀಯ ಪಿಯುಸಿ ಮತ್ತು 7ನೇ ತರಗತಿಯಲ್ಲಿ ಉತ್ತೀರ್ಣರಾಗಿ ಇರುವ ಜನರು ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಗ್ರಾಮ್ ಪಂಚಾಯಿತಿಗಳಲ್ಲಿ ವಿವಿಧ ಹಂತಗಳಲ್ಲಿ ಹುದ್ದೆಗಳು ಖಾಲಿ ಇದ್ದು ಇವುಗಳ ಭರ್ತಿಗೆ, ಗ್ರಾಮೀಣ ಅಭಿವೃದ್ಧಿ ಮತ್ತು ಕರ್ನಾಟಕ ಪಂಚಾಯತ್ ರಾಜ್ ಇಲಾಖೆ ಆಯುಕ್ತಾಲಯದಿಂದ ಆ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಆಡಳಿತ ಅಧಿಕಾರಿಗಳಿಗೆ ಆದೇಶ ಹೊರಡಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 6,026 ಗ್ರಾಮ ಪಂಚಾಯಿತಿ ಹುದ್ದೆಗಳು ಖಾಲಿ ಇದೆ. ಇದರಲ್ಲಿ ಸಾವಿರಾರು ಹುದ್ದೆಗಳು ಕೆಳ ಹಂತದ ನಾಲ್ಕು ವೃಂದದ ಹುದ್ದೆಗಳಾಗಿ ಇರುತ್ತವೆ.

  • ಬಿಲ್ ಕಲೆಕ್ಟರ್.
  • ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್.
  • ವಾಟರ್ ಆಪರೇಟರ್.
  • ಸ್ವಚ್ಛತಾಗಾರರು.

ಇನ್ನು ಪ್ರತಿ ತಿಂಗಳಿಗೆ 15,000 ದಿಂದ 30,000 ವರೆಗೂ ಸಂಬಳ ಇರುತ್ತದೆ. ಇದು, ಹೆಚ್ಚಳ ಕೂಡ ಆಗುವ ಸಾಧ್ಯತೆ ಇದೆ. ಬಿಲ್ ಕಲೆಕ್ಟರ್ ಅಥವಾ ಕರವಸೂಲಿಗಾರರು ಹುದ್ದೆಗಳಿಗೆ ದ್ವಿತೀಯ ಪಿಯುಸಿ ಉತ್ತೀರ್ಣರಾಗಿ ಇರುವ ವ್ಯಕ್ತಿಗಳು ಅರ್ಜಿಗಳನ್ನು ಸಲ್ಲಿಸಬಹುದು ಮತ್ತು ಅವರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇನ್ನು ಕ್ಲರ್ಕ್ ಮತ್ತು ಡೇಟಾ ಎಂಟ್ರಿ ಆಪರೇಟರ್’ಗಳಿಗೆ ಕೂಡ ದ್ವಿತೀಯ ಪಿಯುಸಿ ಉತ್ತೀರ್ಣರಾಗಿ ಇರುವ ವ್ಯಕ್ತಿಗಳು ಅರ್ಜಿ ಸಲ್ಲಿಸಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಅಂತಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವಾಟರ್ ಆಪರೇಟರ್ ಹುದ್ದೆಗಳಿಗೆ ಕನಿಷ್ಠ 7 ನೇ ತರಗತಿ ಉತ್ತೀರ್ಣರಾಗಿರಬೇಕು ಈ ರೀತಿಯ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಗ್ರಾಮ ಪಂಚಾಯಿತಿ ಸ್ವಚ್ಛತಾಗಾರರು ಹುದ್ದೆಗಳಿಗೆ ಯಾವುದೇ ರೀತಿಯ ವಿದ್ಯಾ ಅರ್ಹತೆ ಕಡ್ಡಾಯವಾಗಿ ಇಲ್ಲ. ಮೇಲೆ ತಿಳಿಸಿರುವ ಹುದ್ದೆಗಳ ಬಗ್ಗೆ ಆಸಕ್ತಿ ಇರುವವರು ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

ನೇಮಕಾತಿ ಮಾಡುವ ವಿಧಾನ :-
ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಬಿಲ್ ಕಲೆಕ್ಟರ್, ಡೇಟಾ ಎಂಟ್ರಿ ಆಪರೇಟರ್, ವಾಟರ್ ಆಪರೇಟರ್ ಹಾಗೂ ಸ್ವಚ್ಛತಾಗಾರರು ಹುದ್ದೆಗಳಿಗೆ ಆಯಾ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಅಧಿಸೂಚನೆ ಹೊರಡಿಸಿದೆ, ಜಿಲ್ಲಾ ಮಟ್ಟದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಿ ಆಯ್ಕೆ ಪಟ್ಟಿ ಬಿಡುಗಡೆ ಮಾಡುವರು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಎಂದು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. 18 ರಿಂದ 30 ವರ್ಷದ ಒಳಗಿನ ವ್ಯಕ್ತಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ( SC/ST ) ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ. ಒಬಿಸಿ ( OBC ) ವಿದ್ಯಾರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಇನ್ನು ಅಧಿಸೂಚನೆ ಬಿಡುಗಡೆ ಮಾಡಿರುವ ಸರ್ಕಾರ ಕೆಲವೇ ದಿನಗಳಲ್ಲಿ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಮಾಡಿಕೊಡುತ್ತದೆ ಈ ಅಧಿಸೂಚನೆ 6/06/2024ರಂದು ಬಿಡುಗಡೆಯಾಗಿದೆ.

By

Leave a Reply

Your email address will not be published. Required fields are marked *

error: Content is protected !!
Footer code: