ಅನೇಕ ಜನರಿಗೆ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಬೇಕು ಎಂಬ ಆಸೆ ಇರುತ್ತದೆ ಅಂತವರಿಗೆ ನಾವಿಂದು ಸಿಹಿ ಸುದ್ದಿ ಒಂದನ್ನು ತಿಳಿಸಿಕೊಡುತ್ತೇವೆ. ಅದೇನೆಂದರೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ನೇರ ನೇಮಕಾತಿ ನಡೆಯುತ್ತಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವುದಕ್ಕೆ ಅವರ ವಿದ್ಯಾರ್ಹತೆ ಎಷ್ಟು ವಯೋಮಿತಿ ಎಷ್ಟಿರಬೇಕು ಅರ್ಜಿಯನ್ನು ಯಾವ ರೀತಿ ಸಲ್ಲಿಸಬೇಕು ಮತ್ತು ಯಾವ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸಿಕೊಡುತ್ತೇವೆ.
ಕೇಂದ್ರ ರೈಲ್ವೆ ನೇಮಕಾತಿ ಕೋಶ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಒಂದು ಹುದ್ದೆಗೆ ಹದಿನೈದು ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ಇಪ್ಪತ್ನಾಲ್ಕು ವರ್ಷದ ಒಳಗಿನವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಿದ್ಯಾರ್ಹತೆ ಎಷ್ಟಾಗಿರಬೇಕು ಎನ್ನುವುದನ್ನು ನೋಡುವುದಾದರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹತ್ತನೇ ತರಗತಿ ಹಾಗೂ ಐಟಿಐ ಪಾಸಾಗಿರುವ ಯುವಕ-ಯುವತಿಯರು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವಂತ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಫೆಬ್ರವರಿ ಹದಿನಾರು ಎರಡು ಸಾವಿರದ ಇಪ್ಪತ್ತೆರಡರ ಒಳಗಾಗಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹತ್ತನೇ ತರಗತಿಯನ್ನು ಶೇಕಡಾ ಐವತ್ತು ಅಂಕಗಳಿಗೆ ಕಡಿಮೆ ಇಲ್ಲದಂತೆ ಪಾಸಾಗಿರಬೇಕು ಅಲ್ಲದೆ ಸಂಬಂಧಿತ ಟ್ರೆಡ್ ಗಳಲ್ಲಿ ಐಟಿಐ ಪಾಸಾಗಿರಬೇಕು.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವಾಗ ನೂರು ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತದಾದ್ಯಂತ ಎಲ್ಲಿ ಬೇಕಾದರೂ ಕೆಲಸ ಸಿಗಬಹುದು. ರೈಲ್ವೆ ಇಲಾಖೆಯಲ್ಲಿ ಅನೇಕ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ನಿಮಗೆ ಯಾವ ಹುದ್ದೆ ಬೇಕು ಎನ್ನುವುದನ್ನು ಆಯ್ಕೆಮಾಡಿಕೊಂಡು ಆ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ನಿಮಗೂ ಕೂಡ ಭಾರತೀಯ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುವ ಆಸೆ ಇದ್ದಲ್ಲಿ ಈ ಕೂಡಲೇ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರೊಂದಿಗೆ ನಿಮ್ಮ ಸ್ನೇಹಿತರು ಹಾಗೂ ಪರಿಚಿತರಿಗು ಮಾಹಿತಿಯನ್ನು ತಿಳಿಸಿರಿ.