ಕಲಿತ ನಂತರ ಬಹಳಷ್ಟು ಜನರಿಗೆ ಅನುಕೂಲಕರ ಉದ್ಯೋಗ ಸಿಗದೆ ಪರದಾಟ ಪಡುತ್ತಿರುತ್ತಾರೆ. ಗ್ರಾಮ ಪಂಚಾಯತಿ, ಸರ್ಕಾರಿ ಶಾಲೆ ಇಂತಹ ಸ್ಥಳಗಳಲ್ಲಿ ಕೆಲಸ ಮಾಡಲು ಆಸಕ್ತಿ ಇರುತ್ತದೆ ಆದರೆ ಅವಕಾಶವಿರುವುದಿಲ್ಲ. ಅಂತವರಿಗೆ ತುಮಕೂರು ಜಿಲ್ಲೆಯ ಗ್ರಾಮ ಪಂಚಾಯತಿ ಗ್ರಂಥಾಲಯದಲ್ಲಿ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ.
ತುಮಕೂರು ಜಿಲ್ಲೆಯ ಗ್ರಾಮ ಪಂಚಾಯತ್ ನ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು ಹಾಗೂ ಕೇಳಿದ ವಿದ್ಯಾರ್ಹತೆಯನ್ನು ಪಡೆದಂತಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ತುಮಕೂರು ಜಿಲ್ಲೆಯ ಗ್ರಾಮ ಪಂಚಾಯತ್ ಗ್ರಂಥಾಲಯದ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಯ 19 ಖಾಲಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ತುಮಕೂರು ಜಿಲ್ಲೆಯ ಗ್ರಾಮ ಪಂಚಾಯತಿ ನೇಮಕಾತಿ ಅಧಿಸೂಚನೆ ಪ್ರಕಾರ ಕೆಲವು ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ 18 ವರ್ಷ ತುಂಬಿರಬೇಕು ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 36 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷ, ಪ್ರವರ್ಗ 1 ಎಸ್ ಸಿ, ಎಸ್ ಟಿ ಅಭ್ಯರ್ಥಿಗಳಿಗೆ 40ವರ್ಷ ನಿಗದಿಪಡಿಸಲಾಗಿದೆ.
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿತಿಂಗಳು 12000 ರೂಪಾಯಿ ಗೌರವಧನ ನೀಡಲಾಗುತ್ತದೆ. ತುಮಕೂರು ಜಿಲ್ಲೆಯ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇಲ್ಲ.
ಅಭ್ಯರ್ಥಿಗಳು ತುಮಕೂರು ಜಿಲ್ಲಾ ಪಂಚಾಯತನ ಅಧಿಕೃತ ವೆಬ್ ಸೈಟ್ ನಲ್ಲಿ ಇರುವ ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆದು ಭರ್ತಿ ಮಾಡಿ ಖುದ್ದಾಗಿ ಅಭ್ಯರ್ಥಿಗಳು ಭೇಟಿ ಮಾಡಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಅಭ್ಯರ್ಥಿಗಳು ಎಸ್ಎಸ್ಎಲ್ ಸಿ ಅಂಕಪಟ್ಟಿ, ಆಯಾ ಗ್ರಾಮ ಪಂಚಾಯತಿಯಲ್ಲಿ ವಾಸವಾಗಿರಬೇಕು ಆ ಬಗ್ಗೆ ತಾಲ್ಲೂಕು ತಹಶೀಲ್ದಾರರಿಂದ ಪಡೆದ ದೃಢೀಕೃತ ವಾಸಸ್ಥಳ ಪ್ರಮಾಣ ಪತ್ರ, ಅಭ್ಯರ್ಥಿ ಕನ್ನಡ ಮಾಧ್ಯಮದಲ್ಲಿ ಕಲಿತಿದ್ದರೆ ಕನ್ನಡ ಮಾಧ್ಯಮ ಪ್ರಮಾಣ ಪತ್ರ, ವೋಟರ್ ಐಡಿ, ಜಾತಿ ಪ್ರಮಾಣ ಪತ್ರ, ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಸಂಬಂಧಿಸಿದ ಇಲಾಖೆಯಿಂದ ಪಡೆದ ದೃಢೀಕರಣ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
ತುಮಕೂರು ಜಿಲ್ಲೆಯ ಅಂಕಸಂದ್ರ, ಬಾಗೇನಹಳ್ಳಿ, ಬೇವಿನಹಳ್ಳಿ ಬೈರನಾಯಕನಹಳ್ಳಿ, ಚನ್ನಕೇಶವಪುರ, ದಂಡಿನಶಿವರ, ಗರಣಿ, ಹುಳಿಯಾರು, ಕೆಂಕೆರೆ, ಕೊಡಗೆಹಳ್ಳಿ, ಮುದ್ದೇನಹಳ್ಳಿ, ನಡೆಮಾವಿನಪುರ, ನಾದೂರು, ನಲ್ಲಿಗಾನಹಳ್ಳಿ, ನಿಡವಳಲು, ನೊಣವಿನಕೆರೆ, ಸಿದ್ದಾಪುರ, ವಳ್ಳೂರು, ವಡ್ಡಗೆರೆ ಗ್ರಾಮ ಪಂಚಾಯತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ, ಸುಲಭವಾಗಿ ಸಿಗುವ ಅವಕಾಶವನ್ನು ಕಡೆಗಣಿಸಬೇಡಿ.