ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಡೆಗಳಲ್ಲಿಯೂ ನಿರುದ್ಯೋಗ ಸಮಸ್ಯೆ ಕಂಡುಬರುತ್ತಿದ್ದು ಎಲ್ಲರೂ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ನಾವಿಂದು ಸಿಹಿ ಸುದ್ದಿಯನ್ನು ತಿಳಿಸಿಕೊಡುತ್ತೇವೆ. ಅದೇನೆಂದರೆ ಎರಡು ಸಾವಿರದ ಇಪ್ಪತ್ತೆರಡುಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕಂದಾಯ ಇಲಾಖೆಯಲ್ಲಿ ನೇಮಕಾತಿ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಯಾವೆಲ್ಲಾ ಹುದ್ದೆಗಳು ಖಾಲಿ ಇವೆ ಅರ್ಜಿ ಹೇಗೆ ಸಲ್ಲಿಸಬೇಕು ಯಾರು ಸಲ ಅರ್ಜಿಯನ್ನು ಸಲ್ಲಿಸಬಹುದು ಎಂಬುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸಿಕೊಡುತ್ತೇವೆ.
ಕರ್ನಾಟಕ ರಾಜ್ಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸಾಫ್ಟ್ವೇರ್ ಡೆವಲಪರ್ ಹುದ್ದೆಗಳ ಭರ್ತಿಗಾಗಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ಒಟ್ಟು ಐದು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಒಂದು ಹುದ್ದೆಯ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಎಂಬತ್ತು ಸಾವಿರ ರೂಪಾಯಿಗಳವರೆಗೆ ಇರುತ್ತದೆ. ಇನ್ನು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವ ವಿದ್ಯಾರ್ಹತೆಯನ್ನು ಹೊಂದಿರಬೇಕು ಎಂಬುದರ ಕುರಿತು ನೋಡುವುದಾದರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ ಅಥವಾ ಬಿಟೆಕ್ ಇನ್ ಕಂಪ್ಯೂಟರ್ ಸೈನ್ಸ್ ಮುಗಿಸಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳ ಬರ್ತಿಯು ಗುತ್ತಿಗೆ ಆಧಾರಿತವಾಗಿದ್ದು ಇವು ತಾತ್ಕಾಲಿಕ ಹುದ್ದೆಗಳಾಗಿವೆ. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 11 ಫೆಬ್ರುವರಿ 2022ರ ಒಳಗಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ರೆಸ್ಯುಮ್ ಮತ್ತು ದಾಖಲೆಗಳನ್ನು [email protected] ಈ ಇ-ಮೇಲ್ ವಿಳಾಸಕ್ಕೆ ಕಳಿಸಬೇಕು. ನೀವು ಕೂಡ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದರೊಂದಿಗೆ ನಿಮ್ಮ ಸ್ನೇಹಿತರು ಹಾಗೂ ಪರಿಚಿತರಿಗು ತಿಳಿಸಿರಿ.