ಕನ್ನಡ ಸಿನಿಮಾರಂಗದ ನಾಯಕ ನಟಿಯಾದ ತಾರಾ ಅವರ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ ತಾರಾ ಅವರು ಬಹುಭಾಷಾ ನಟಿಯಾಗಿದ್ದು ಕನ್ನಡ ತೆಲುಗು ಮಲಯಾಳಂ ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ತಮ್ಮ ಅತ್ಯುತ್ತಮ ನಟನೆಯ ಮೂಲಕ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಾಯಕ ನಟಿಯಾಗಿ ಕೆಲವೊಂದು ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಸಿನಿಮಾರಂಗದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ತಮ್ಮ ಅತ್ಯುತ್ತಮ ನಟನೆಯಿಂದ ಅನೇಕ ಸಿನಿಮಾಗಳಲ್ಲಿ ಅವಕಾಶವನ್ನು ಪಡೆದುಕೊಂಡಿದ್ದಾರೆ ಇವರ ಹಸೀನಾ ಎಂಬ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ದೊರೆತಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟಿಯರ ಸಾಲಿನಲ್ಲಿ ತಾರಾ ಅವರು ಕೂಡ ಸ್ಥಾನವನ್ನು ಪಡೆದುಕೊಂಡಿದ್ದಾರೆ ಇವರ ಮೂಲ ಹೆಸರು ಅನುರಾಧ. ಮೂರು ದಶಕಗಳಿಗಿಂತಲೂ ಹೆಚ್ಚಿನ ಕಾಲ ಚಿತ್ರರಂಗದಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಇವರು ಐದು ನೂರಕ್ಕೂ ಹೆಚ್ಚಿನ ಚಿತ್ರಗಳಲ್ಲಿ ನಟನೆ ಮಾಡಿದ್ದಾರೆ. ಸದ್ಯ ಇವರು ಪೋಷಕ ನಟಿಯಾಗಿ ಅನೇಕ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಇಂದಿಗೂ ಕೂಡ ಇವರಿಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಇವರು ಸಿನಿಮಾರಂಗದ ಜೊತೆಗೆ ರಾಜಕೀಯದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಛಾಯಾಗ್ರಾಹಕ ವೇಣು ಅವರು ತಾರಾ ಅವರ ಪತಿ ಇವರು ತಮ್ಮ ಕುಟುಂಬದವರೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ.
ತಾರಾ ಅವರು ಬೆಂಗಳೂರಿನಲ್ಲಿ ತಮ್ಮದೇ ಆದ ಸುಂದರವಾದ ಮನೆಯನ್ನು ಕಟ್ಟಿಕೊಂಡಿದ್ದಾರೆ ಇತ್ತೀಚೆಗೆ ತಾರಾ ಅವರು ತಮ್ಮ ಮನೆಯಲ್ಲಿ ಸರಳವಾಗಿ ತಮ್ಮ ತಾಯಿಯ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ತಾರಾ ಅವರ ಮಗ ಶ್ರೀ ಕೃಷ್ಣ ಅಜ್ಜಿಯ ಕೈಹಿಡಿದು ಕೇಕನ್ನು ಕತ್ತರಿಸಿರುವ ವಿಡಿಯೋವನ್ನು ತಾರಾ ಅವರು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುವುದರ ಜೊತೆಗೆ ನನ್ನಅಮ್ಮ ನೂರುಕಾಲ ಸುಖವಾಗಿ ಇರಲಿ ಎಂದು ನೀವೆಲ್ಲಾ ಹಾರೈಸಿ ಎಂದು ಬರೆದುಕೊಂಡಿದ್ದಾರೆ. ಒಟ್ಟಾರೆಯಾಗಿ ತಾರಾ ಅವರು ತಮ್ಮ ಸಿನಿ ಬದುಕಿನ ಜೊತೆಗೆ ರಾಜಕೀಯ ರಂಗದಲ್ಲಿಯೂ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದು ತಮ್ಮ ಕುಟುಂಬದವರೊಂದಿಗು ಕೂಡ ಆನಂದದಿಂದ ಸಮಯವನ್ನು ಕಳೆಯುತ್ತಿದ್ದಾರೆ. ಅವರ ಜೀವನದಲ್ಲಿ ಇದೇ ರೀತಿ ಯಾವಾಗಲೂ ಸುಖ ಸಮೃದ್ಧಿ ನೆಲೆಸಲಿ ಎಂದು ನಾವೆಲ್ಲರೂ ಹಾರೈಸೋಣ.